ಬೆಂಗಳೂರು: ಕೋವಿಡ್ ಅವಧಿಯಲ್ಲಿ ಯಡಿಯೂರಪ್ಪ ಅವರ ಸರಕಾರವು ಗರಿಷ್ಠ ಅನುದಾನವನ್ನು ನೀಡಿದೆ ಎಂದು ಶಾಸಕ ರಾಜುಗೌಡ ಅವರು ತಿಳಿಸಿದರು.
ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಭಾಗದ ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸರಕಾರವು ಹೆಚ್ಚಿನ ಅನುದಾನ ಕೊಟ್ಟಿದೆ ಎಂದು ಮೆಚ್ಚುಗೆ ಸೂಚಿಸಿದರು. ಬಸವರಾಜ ಬೊಮ್ಮಾಯಿಯವರು ಎಲ್ಲ ಸಮಾಜಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಮೀಸಲಾತಿಯ ನಾಲ್ಕು ದಶಕಗಳ ವಿನಂತಿಯನ್ನು ಈಡೇರಿಸಿದ್ದಾರೆ ಎಂದು ಧನ್ಯವಾದ ಸಮರ್ಪಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರು ಏಕವಚನದಿಂದ ಮಾತನಾಡುವ ತಮ್ಮ ಮುಖಂಡರನ್ನು ನಿಯಂತ್ರಣದಲ್ಲಿ ಇಡಬೇಕು ಎಂದು ಅವರು ಒತ್ತಾಯಿಸಿದರು. ಇಲ್ಲಿ ಸಕ್ಕರೆ ಕಾರ್ಖಾನೆಯನ್ನು ತೆರೆಯುವೆ. ಗಾರ್ಮೆಂಟ್ ಫ್ಯಾಕ್ಟರಿ, ಉತ್ತಮ ಆಸ್ಪತ್ರೆ, ಶಾಲೆ ತೆರೆಯುವೆ ಎಂದು ಸವಾಲೆಸೆದರು. ಸಾಮಾನ್ಯ ಚಹಾ ಮಾರುವವರು ಪ್ರಧಾನಿ ಆಗಿದ್ದಾರೆ. ನಾನು ಇನ್‍ಸ್ಪೆಕ್ಟರ್ ಮಗ. ನಮ್ಮದು ಬಿಜೆಪಿ; ಸಾಮಾನ್ಯರಿಗೆ ಅಧಿಕಾರ ನೀಡುವ ಪಕ್ಷ. ವಂಶಾಡಳಿತದ ಪಕ್ಷ ಅಲ್ಲ ಎಂದು ಕಾಂಗ್ರೆಸ್ಸಿಗರಿಗೆ ಕಿವಿಮಾತು ಹೇಳಿದರು.
ಕಾಂಗ್ರೆಸ್ಸಿಗರು ಪಾಂಡಿಚೇರಿ ವಾಹನದಲ್ಲಿ (ಪಿವೈ) ಓಡಾಡುತ್ತಾರೆ. ನಾವು ತೆರಿಗೆ ವಂಚಿಸಿದ ಆರೋಪ ಮಾಡುತ್ತಾರೆ. ನನ್ನದು ಕಳಂಕರಹಿತ ಆಡಳಿತ ಎಂದು ತಿಳಿಸಿದರು. ನನ್ನ ಉತ್ತಮ ಕಾರ್ಯಗಳನ್ನು ಜನರಿಗೆ ತಿಳಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಜಿಲ್ಲೆಯ 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿ ಎಂದು ವಿನಂತಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ