ಬೆಂಗಳೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆಯುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ಲಭಿಸಿದೆ. ನಾಳೆ ವೇಳೆಗೆ ಇನ್ನಷ್ಟು ಜನರು ನೋಂದಣಿ ಮಾಡುವ ನಿರೀಕ್ಷೆ ಇದ್ದು, 1.25 ಕೋಟಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಸುನೀಲ್ ಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, 10 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಹೆಸರು ನೋಂದಾಯಿಸಿವೆ. 45 ದೇಶಗಳಲ್ಲಿ, 26 ರಾಜ್ಯಗಳಿಂದ ಜನರು ನೋಂದಣಿ ಮಾಡಿದ್ದಾರೆ. ಇದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಎಂದರು.
ನೆಲ- ಜಲ- ಆಕಾಶದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಧಾನಸೌಧದ ಮೆಟ್ಟಿಲು, ಮೈಸೂರು ಅರಮನೆ, ಪೌರಕಾರ್ಮಿಕರ ನಡುವೆ, ಜೋಗ್ ಜಲಪಾತ, ಚಿತ್ರದುರ್ಗದ ಕೋಟೆ, ರಾಯಚೂರಿನ ಥರ್ಮಲ್ ಪ್ಲಾಂಟ್- ಹೀಗೆ ಎಲ್ಲ ಕಡೆ ಗಾಯನ ನಡೆಯಲಿದೆ ಎಂದು ತಿಳಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರ ಜನರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ವಿವರ ನೀಡಿದರು.
ಸಿನಿಮಾವೊಂದರಲ್ಲಿ ಕಲೆಗೆ ಅವಮಾನ ಮಾಡಿದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನಾನಿನ್ನೂ ಆ ಸಿನಿಮಾ ನೋಡಿಲ್ಲ. ಆದರೆ, ಮನರಂಜನೆಗಾಗಿ ಜಾನಪದ-ಸಾಂಸ್ಕೃತಿಕ ಕಲೆಗಳನ್ನು ಅವಮಾನ ಮಾಡಬಾರದು. ಅಂಥ ಅವಮಾನ ಆಗಿದ್ದರೆ ಸಿನಿಮಾ ನಿರ್ಮಾಪಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು.
ಸಂಸದ ಪಿ.ಸಿ.ಮೋಹನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ