ಬೆಂಗಳೂರು: ಖರ್ಗೆ ಅವರು ಮುಂದಿನ ಚುನಾವಣೆಯಲ್ಲಿ ಸಿದ್ರಾಮಣ್ಣ ಟಿಕೆಟ್ ಕೊಡುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ನಾವು ಭವಿಷ್ಯದಲ್ಲಿ ನೋಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಹುಲಿಯಾ ಕಾಡಿಗೆ ಹೋಗಲಿದೆ. ಬಿಜೆಪಿಯ ಕಮಲ ಅರಳಲಿದೆ ಎಂದು ತಿಳಿಸಿದರು. ಸಿದ್ರಾಮಣ್ಣ ನರಹಂತಕರಾಗಿದ್ದರು. ಅವರೀಗ ಟವೆಲ್ ಹಿಡಿದು ಓಡಾಡುತ್ತಿದ್ದಾರೆ. ಅವರು ಮುಂದಿನ ದಿನದಲ್ಲಿ ಶಾಶ್ವತ ನಿರುದ್ಯೋಗಿ ಆಗಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು.
ಹಿಂದುಳಿದ ವರ್ಗದವರನ್ನು ಸಿದ್ರಾಮಣ್ಣ ತುಳಿದರು. ಕನಕ ಜಯಂತಿ, ಕನಕನ ಕ್ಷೇತ್ರದ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಕಾರಣರು. ಬೊಮ್ಮಾಯಿ ಅವರು ಮೀಸಲಾತಿ ಪ್ರಮಾಣ ಹೆಚ್ಚಿಸಿದರು ಎಂದು ವಿವರಿಸಿದರು. ಈಡಿಗ, ಪರಿವಾರ, ತಳವಾರರ ಸಮಸ್ಯೆ ಪರಿಹರಿಸಿದ ಸರಕಾರ ನಮ್ಮದು ಎಂದು ಮೆಚ್ಚುಗೆ ಸೂಚಿಸಿದರು.
ಸಿದ್ರಾಮಣ್ಣ ಯಾಕೆ ಹಿಂದುಳಿದವರನ್ನು ಕಡೆಗಣಿಸಿದ್ದರು? ಸಿದ್ರಾಮಣ್ಣನಿಗೆ ಕ್ಷೇತ್ರ ಇಲ್ಲವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಿಜೆಪಿ ಮಹಾಭಾರತದ ಯುದ್ಧದಲ್ಲಿ ಗೆದ್ದು, ಕರ್ನಾಟಕದ ಕಲ್ಯಾಣ ಮಾಡಲಿದೆ ಎಂದು ತಿಳಿಸಿದರು.
ಬಿಜೆಪಿ ಸರ್ವಸ್ಪರ್ಶಿಯಾಗಿ ಬೆಳೆಯುತ್ತಿದೆ. ಕಲ್ಬುರ್ಗಿಯ ರಸ್ತೆ ರಸ್ತೆಗಳಲ್ಲಿ ಕೇಸರೀಕರಣ ಆಗಿದೆ. ಒಬಿಸಿ ವರ್ಗ ಬಿಜೆಪಿ ಜೊತೆಗಿದೆ ಎಂಬ ಸಂದೇಶ ಅಹಿಂದದ ಸಿದ್ರಾಮಣ್ಣನಿಗೆ ಹೋಗಿದೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ