ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಿಜಯಶಾಲಿಯಾದ ನೂತನ ಸದಸ್ಯರು ಹಾಗೂ ಆ ಭಾಗದ ಶಾಸಕರು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅಭಯ್ ಪಾಟೀಲ್, ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ್, ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವಿಜಯಪುರ ಪಾಲಿಕೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರನ್ನು ರಾಜ್ಯದ ಮುಖಂಡರು ಅಭಿನಂದಿಸಿ ಸಿಹಿ ತಿನ್ನಿಸಿ ಸಂತಸ- ಸಂಭ್ರಮ ವ್ಯಕ್ತಪಡಿಸಿದರು. ನೂತನ ಸದಸ್ಯರನ್ನು ಅಭಿನಂದಿಸಲಾಯಿತು.
ಸಂಘಟಿತ ಪ್ರಯತ್ನದ ಗೆಲುವು- ಬಸನಗೌಡ ಪಾಟೀಲ್ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ನಿರ್ಮಲ್ ಕುಮಾರ್ ಸುರಾಣ, ಶಾಸಕರು ಮತ್ತು ಇತರ ಮುಖಂಡರ ಸಂಘಟಿತ ಪ್ರಯತ್ನ ಮತ್ತು ನಿರ್ಣಯಗಳಿಂದ ಈ ಫಲಿತಾಂಶ ಲಭಿಸಿದೆ. ಹಿಂದುತ್ವ ಮತ್ತು ಅಭಿವೃದ್ಧಿಯ ಆಧಾರದಲ್ಲಿ ಸ್ಪರ್ಧಿಸಲಾಯಿತು. 35 ವಾರ್ಡ್‍ಗಳಲ್ಲಿ 2.5 ಲಕ್ಷ ಹಿಂದೂಗಳ ಮತ ಇದೆ ಎಂದು ವಿವರಿಸಿದರು.
ನಮ್ಮ ಸರಕಾರದ ಅಭಿವೃದ್ಧಿ ಕಾರ್ಯ, ಹಿಂದುತ್ವದ ಕುರಿತ ಗಟ್ಟಿ ನಿಲುವಿನಿಂದ ಗೆಲುವು ಸಾಧ್ಯವಾಗಿದೆ ಎಂದು ವಿಶ್ಲೇಷಿಸಿದರು. ಟಿಕೆಟ್ ಹಂಚುವ ವೇಳೆ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಲಾಯಿತು ಎಂದು ತಿಳಿಸಿದರು.
ಎಲ್ಲ 33 ವಾರ್ಡ್‍ಗಳಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲ ಹೊಸ ಅಭ್ಯರ್ಥಿಗಳೇ ಇದ್ದರು. ಬಿಜೆಪಿ ಇದ್ದರಷ್ಟೇ ಗೆಲುವು ಎಂಬ ಭಾವನೆ ಇತ್ತು. ಇದರಿಂದ ಗೆಲುವು ಸುಲಭವಾಯಿತು ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ