ಚಿಕ್ಕಮಗಳೂರು: 10 ವರ್ಷದ ಬಳಿಕ ರಾಷ್ಟ್ರ ಮಟ್ಟದ ಯುವ ಜನೋತ್ಸವ ಕರ್ನಾಟಕದಲ್ಲೇ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
2022-23 ನೇ ಸಾಲಿನ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಕುವೆಂಪು ಕಲಾ ಮಂದಿರದಲ್ಲಿ ಸಚಿವ ಡಾ.ನಾರಾಯಣಗೌಡ ಅವರು, ಶಾಸಕ ಸಿಟಿ ರವಿ ಅವರು ಚಾಲನೆ ನೀಡಿದರು.
ಯುವಕರಿಗಾಗಿ ನೂತನ ಯುವನೀತಿ, ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘ ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ದೇಶದಲ್ಲೇ ಮೊದಲನೇ ಬಾರಿಗೆ ಯುವನೀತಿಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಯುವಕರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲಲು ಅಗತ್ಯವಿರುವ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್‌ಗೆ ಎರಡರಂತೆ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸಲಾಗುತ್ತಿದೆ. ಯುವ ಸಂಘಗಳಿಗೆ 10 ಸಾವಿರ ಸುತ್ತುನಿಧಿ, 5 ಲಕ್ಷದವರೆಗೂ ಲೋನ್, 1 ಲಕ್ಷ ಸಬ್ಸಿಡಿ ನೀಡಲಾಗುತ್ತದೆ. ಇದರ ಜೊತೆಗೆ ಯುವ ಜನೋತ್ಸವದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವವರ ಬಹುಮಾನ ಮೊತ್ತವನ್ನು ಹೆಚ್ಚಿಸಲಾಗಿದೆ. ಯುವ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಬಹುಮಾನದ ಮೊತ್ತ ಹೆಚ್ಚಳ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ಸುಮಾರು 23 ಕೋಟಿಯಷ್ಟು ಅನುದಾನ ನೀಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ, ಯುವ ಜನರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಎಂ ಪಿ ಕುಮಾರಸ್ವಾಮಿ, ಎಂಎಲ್‌ಸಿ ಪ್ರಾಣೇಶ್, ಪದ್ಮಶ್ರೀ ತುಳಸಿಗೌಡ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯುವ ನಿರ್ದೇಶಕ ಸಾಗರ್ ಪುರಾಣಿಕ್, ಸಚಿವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ