ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ನಾಲಾ ವಿಸ್ತøತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದಕ್ಕೆ ಸಂತಸ ಸೂಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ದಶಕಗಳ ಕನಸು ಈಗ ನನಸಾಗಿದೆ. ಈ ಯೋಜನೆಗಾಗಿ ರಾಜ್ಯದ ದನಿಯಾಗಿ ದಿಟ್ಟ ನಿರ್ಧಾರ ಕೈಗೊಂಡ ನಮ್ಮ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರಿಗೂ ಹಾಗೂ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೂ ಧನ್ಯವಾದಗಳು.
2/2— Nalinkumar Kateel (@nalinkateel) December 29, 2022
ಈ ಹಿಂದೆ ಕಳಸಾ ಬಂಡೂರಿ ಯೋಜನೆಗೆ ನಾವು ಹೋರಾಟ ಮಾಡಿದ್ದೇವೆ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ಉತ್ತರ ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್ ವರದಿಗೆ ಜಲ ಆಯೋಗದಿಂದ ಅನುಮತಿ ಸಿಕ್ಕಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಇದು ಶುಭ ಸುದ್ದಿ ಆಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ