ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಇದೀಗ ರೈತರಿಗೆ ಮತ್ತೊಂದು ಬಂಪರ್ ಕೊಡುಗೆ ಘೋಷಿಸಿದೆ. ಮೊಲ್ಯಾಸಿಸ್‍ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‍ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ. ಇದರಿಂದ ರೈತರಿಗೆ ಉತ್ತಮ ಆದಾಯ ದೊರಕಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಮೊಲ್ಯಾಸಿಸ್‍ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‍ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 2023ರ ಹೊಸವರ್ಷಕ್ಕೆ ವಿಶೇಷ ಕೊಡುಗೆ ನೀಡಿದೆ ಎಂದು ಈರಣ್ಣ ಕಡಾಡಿಯವರು ತಿಳಿಸಿದ್ದಾರೆ. ಈ ಹಿಂದೆ ಎಥೆನಾಲ್‍ನಿಂದ ಬರುವ ಲಾಭಾಂಶದಲ್ಲಿ 50 ರೂ.ಗಳಂತೆ ಒಟ್ಟು ಎಥೆನಾಲ್‍ನಿಂದ 204 ಕೋಟಿ ರೂ.ಹಣವನ್ನು ಬೆಳಗಾರರಿಗೆ ನೀಡಲು ಸರ್ಕಾರ ಆದೇಶಿಸಿತ್ತು. ಇದೀಗ ಇನ್ನೊಂದು ಹೆಚ್ಚುವರಿ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಎಥೆನಾಲ್‍ನಿಂದ ಬರುವ ಲಾಭಾಂಶದಲ್ಲಿ 50 ರೂ.ಗಳಂತೆ ಒಟ್ಟು ಎಥೆನಾಲ್‍ನಿಂದ 204 ಕೋಟಿ ರೂ. ಪಾವತಿಸಲು ಈ ಹಿಂದೆ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಕಬ್ಬು ಬೆಳೆಗಾರರಿಗೆ ಬೊಮ್ಮಾಯಿ ಸರ್ಕಾರ ಇದೀಗ ರೈತರಿಗೆ ಮತ್ತೊಂದು ಬಂಪರ್ ಕೊಡುಗೆ ಘೋಷಿಸಿದ್ದು, ಮೊಲ್ಯಾಸಿಸ್‍ನಿಂದ ಬರುವ ಲಾಭಾಂಶದಲ್ಲಿ ರೈತರಿಗೆ ಪ್ರತಿ ಮೆಟ್ರಿಕ್ ಟನ್‍ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಿದೆ. ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ ಎಂದಿದ್ದಾರೆ.
ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್‍ಆರ್‍ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ. ಇದರಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಆದ್ದರಿಂದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರೈತರ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ