ಬೆಂಗಳೂರು: ರಾಜಕೀಯ ಚಾಣಕ್ಯ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರ್ನಾಟಕ ಭೇಟಿಯ ಬಳಿಕ ಜೆಡಿಎಸ್‍ಗೆ ಹಳೆ ಮೈಸೂರು ಭಾಗದಲ್ಲೂ ಸಂಪೂರ್ಣ ನೆಲಕಚ್ಚುವ ಭೀತಿ ಉಂಟಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಅಮೂಲ್ -ಕೆಎಂಎಫ್ (ನಂದಿನಿ) ಜೊತೆ ವಿಲೀನ ಇಲ್ಲ ಎಂದು ಮುಖ್ಯಮಂತ್ರಿಗಳು ಮತ್ತು ರಾಜ್ಯದ ಸಹಕಾರ ಸಚಿವರು ಈಗಾಗಲೇ ತಿಳಿಸಿದ್ದಾರೆ. ಪರಸ್ಪರ ಸಹಕಾರದೊಂದಿಗೆ, ಉತ್ತಮ ಅಂಶಗಳನ್ನು ಹಂಚಿಕೊಂಡು ಬೆಳೆಯಬೇಕೆಂಬ ಆಶಯವನ್ನು ಅಮಿತ್ ಶಾ ಅವರು ವ್ಯಕ್ತಪಡಿಸಿದ್ದರು. ಆದರೆ, ಕಣ್ಣೀರಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಮಾಲೆ ರೋಗದವರಂತೆ ಎಲ್ಲೆಡೆ ಹಳದಿ ಕಂಡಂತೆ ಭ್ರಮಿಸಿ ಮಾತನಾಡಲು ಆರಂಭಿಸಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಹೊಂದಾಣಿಕೆ ರಾಜಕೀಯದಲ್ಲಿ ನಿಸ್ಸೀಮರಾದ ಕುಮಾರಸ್ವಾಮಿ ಅವರಿಗೆ ಹಳೆ ಮೈಸೂರು ಭಾಗದಲ್ಲಿ ಸೋಲುವ ಭೀತಿ ಹೆಚ್ಚಾಗಿದೆ. ಮಂಡ್ಯದಲ್ಲಿ ಅಮಿತ್ ಶಾ ಅವರ ಸಮಾವೇಶದ ಯಶಸ್ಸು, ಬೆಂಗಳೂರಿನಲ್ಲೂ ಸಮಾವೇಶಕ್ಕೆ ಅಪಾರ ಜನರು ಬಂದಿರುವುದನ್ನು ಗಮನಿಸಿ ಅವರ ಆತಂಕ ಹೆಚ್ಚಿದೆ. ಅದೇ ಕಾರಣಕ್ಕೆ ಅವರು ಬುದ್ಧಿ ಭ್ರಮಣೆಗೆ ಒಳಗಾದವರಂತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷವು ಮಂಡ್ಯ, ಮೈಸೂರು, ಹಾಸನ ಸೇರಿ ಹಳೆ ಮೈಸೂರು ಭಾಗದಲ್ಲಿ ಸೊರಗುತ್ತಿದೆ. ಇದರಿಂದ ವಿಚಲಿತರಾದ ಎಚ್.ಡಿ.ಕುಮಾರಸ್ವಾಮಿ ಸುಳ್ಳು ಸುದ್ದಿ ಹಬ್ಬಿಸುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಅವರಿಗೆ ಚುನಾವಣೆ ಬಂದಾಗ ಕನ್ನಡಾಭಿಮಾನ ಉಕ್ಕಿ ಹರಿಯುತ್ತದೆ; ನೆಲ, ಜಲದ ಕುರಿತು ಅವರು ಮೊಸಳೆಕಣ್ಣೀರು ಹಾಕುತ್ತಾರೆ ಎಂದು ಆಕ್ಷೇಪಿಸಿದ್ದಾರೆ.
ಜೆಡಿಎಸ್ ಮುಖಂಡರ ಕಪಟ ರಾಜಕೀಯವನ್ನು ಜನರು ಈಗಾಗಲೇ ತಿರಸ್ಕರಿಸಿದ್ದಾರೆ. ಭವಿಷ್ಯದಲ್ಲಿ ಜನತೆ ಸ್ಥಿರ ಸರಕಾರಕ್ಕಾಗಿ ಬಿಜೆಪಿಗೆ ಪೂರ್ಣ ಬಹುಮತ ಕೊಡಲಿದ್ದು, ಜೆಡಿಎಸ್ ಪಕ್ಷಕ್ಕೆ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ