ಬೆಂಗಳೂರು: ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಫೂರ್ತಿ ನೀಡುವ ಮಹಾನ್ ಚೇತನ. ಅವರ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ನಮ್ಮ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಶ್ರಮಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರವಿಕುಮಾರ್ ಅವರು, ವಿವೇಕಾನಂದರ ಜಯಂತಿ ಅಂಗವಾಗಿ ದೇಶದಾದ್ಯಂತ ಯುವಜನೋತ್ಸವಗಳನ್ನು ಸಂಘಟಿಸಲಾಗುತ್ತಿದೆ. ವಿವೇಕಾನಂದ ಅವರು ತಮ್ಮ 39 ವರ್ಷಗಳ ಜೀವನದಲ್ಲಿ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದವರು. ಆಧ್ಯಾತ್ಮಿಕ ಮಾರ್ಗದರ್ಶನ ನೀಡಿದ್ದ ಅವರು ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಅವರ ಜೀವನ, ಆದರ್ಶಗಳನ್ನು ಪಾಲಿಸಬೇಕು ಎಂದು ಅವರು ಆಶಿಸಿದರು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿ ಭಾಗವಹಿಸಿದ್ದರು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸ್ವಾಮಿ ವಿವೇಕಾನಂದರ ಜೀವನ- ಸಾಧನೆ ಕುರಿತು ಮಾಹಿತಿ ಕೊಡಲಾಯಿತು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ