ಬೆಂಗಳೂರು : ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ.
ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.
ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ ” ರೈತ ಶಕ್ತಿ” ಯೋಜನೆಯನ್ನು ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.
ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.
ನಗದು ಯೋಜನೆಯ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ, ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್‌ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು.
FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನವನ್ನು ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ. 250 / – ರಂತೆ ಗರಿಷ್ಠ ಐದು ಎಕರೆಗೆ ರೂ. 1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು. ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ