ಬೆಂಗಳೂರು: ಕೇಂದ್ರ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಗರಿಷ್ಠ ಅನುದಾನ ಲಭಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಜೆಟ್‍ನಲ್ಲಿ ಕರ್ನಾಟಕಕ್ಕೆ ವಿಶೇಷ ಆದ್ಯತೆ ಲಭಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೀಡಲಾಗುತ್ತಿದೆ. ರೈಲ್ವೆಯ ಹಲವು ಯೋಜನೆಗಳಿಗೂ ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು ಹಣ ನೀಡಲಿದೆ ಎಂದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕದಲ್ಲಿ ತ್ವರಿತಗತಿಯಲ್ಲಿ ಕೆಲಸ ಆಗುತ್ತಿದೆ. ಗರಿಷ್ಠ ಮನೆಗಳ ನಿರ್ಮಾಣಕ್ಕೆ ನೆರವು ಲಭಿಸಲಿದೆ. ಜಲಜೀವನ್ ಮಿಷನ್‍ನಲ್ಲೂ ವೇಗವಾಗಿ ಕೆಲಸ ನಡೆಯುತ್ತಿದೆ. ಜಲಜೀವನ್ ಮಿಷನ್‍ನಲ್ಲಿ 70 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದ್ದು, ಕರ್ನಾಟಕದ ಹೆಚ್ಚು ಜನರಿಗೆ ಪ್ರಯೋಜನ ಸಿಗಲಿದೆ. ಮನೆಮನೆಗೆ ನೀರು ಸರಬರಾಜಾಗಲಿದೆ ಎಂದು ತಿಳಿಸಿದರು. ಇದಕ್ಕಾಗಿ ಮೋದಿಜಿ ಸರಕಾರಕ್ಕೆ ಧನ್ಯವಾದಗಳು ಎಂದು ತಿಳಿಸಿದರು.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಪರಿಹರಿಸಲು ವಿಶೇಷ ಅನುದಾನ ಕೊಟ್ಟಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಎಲ್ಲರ ಗಮನ 150 ಸೀಟು ಗೆಲ್ಲುವ ಕಡೆ ಇರಲಿದೆ ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ಸಂಪೂರ್ಣ ಬಹುಮತದಿಂದ ಸರಕಾರ ರಚಿಸುವುದೇ ನಮ್ಮೆಲ್ಲರ ಆದ್ಯತೆ ಆಗಲಿದೆ ಎಂದು ಅವರು ಹೇಳಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ