ಬೆಂಗಳೂರು: ವಿಜಯ ಸಂಕಲ್ಪ ಯಾತ್ರೆಯು ಅಭೂತಪೂರ್ನ ಜನಬೆಂಬಲದ ಜೊತೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.
ಕಲಬುರ್ಗಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಡ್ ಷೋಗಳಲ್ಲಿ 15ರಿಂದ 20 ಸಾವಿರ ಜನರು ಸೇರುತ್ತಿದ್ದಾರೆ ಎಂದು ತಿಳಿಸಿದರು. ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ಇದೆ ಎಂದ ಅವರು, ಇದು ಬಿಜೆಪಿಯ ಮೇಲಿನ ಪ್ರೀತಿ, ವಿಶ್ವಾಸ, ಗೆಲುವಿನ ಸಂಕೇತ ಎಂದು ತಿಳಿಸಿದರು.
ಕೇಂದ್ರ- ರಾಜ್ಯ ಸರಕಾರಗಳ ಸಾಧನೆ, ನರೇಂದ್ರ ಮೋದಿಜಿ ಅವರ ವ್ಯಕ್ತಿತ್ವ ಮತ್ತು ಅವರ ಸಾಧನೆಗೆ ಸಿಗುತ್ತಿರುವ ಬೆಂಬಲ ಇದು ಎಂದು ವಿಶ್ಲೇಷಿಸಿದರು. 17ರವರೆಗೆ ಯಾತ್ರೆ ಸಂಚರಿಸಲಿದೆ. 40ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಭೇಟಿ ಕೊಡಲಾಗುವುದು ಎಂದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 130ರಿಂದ 140ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ಮೋದಿಜಿ ಅವರಿಗೆ ಪರ್ಯಾಯ ನಾಯಕತ್ವ ಇಲ್ಲದ ಸ್ಥಿತಿ ಇದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇನ್ನೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಭಗವಂತ ಖೂಬಾ, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ರಾವ್ ಮುಳೆ, ಕಲಬುರಗಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು. ಬಳಿಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಬಿಜೆಪಿ ರೋಡ್ ಷೋಗೆ ಭಾರಿ ಜನಬೆಂಬಲ ವ್ಯಕ್ತವಾಯಿತು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ