ಬೆಂಗಳೂರು: ಕಾಂಗ್ರೆಸ್, ಜೆಡಿಎಸ್‍ಗೆ ಈ ಹಿಂದೆ ಅಧಿಕಾರ ಕೊಟ್ಟಿದ್ದೀರಿ. ಕಾಂಗ್ರೆಸ್, ಜೆಡಿಎಸ್‍ಗೆ ಸ್ಥಿರ ಸರಕಾರ ಮಾಡುವ ಯೋಗ್ಯತೆ ಇಲ್ಲ. ಸ್ಥಿರ ಮತ್ತು ಅಭಿವೃದ್ಧಿಪರ ಸರಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು.
ಬನ್ನೇರುಘಟ್ಟದಲ್ಲಿ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಇಂದು ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಶಾಸಕರು ಶ್ರಮಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿ ಕಾರ್ಯದಲ್ಲಿ ಬಿಜೆಪಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ತಿಳಿಸಿದರು. ಕೋವಿಡ್ ವೇಳೆ ಕಾಂಗ್ರೆಸ್ಸಿಗರು, ಜೆಡಿಎಸ್‍ನವರು ಮನೆ ಒಳಗೇ ಇದ್ದರು. ಬಿಜೆಪಿ ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ತೊಡಗಿದರು. ಅನಾಥ ಶವಸಂಸ್ಕಾರಕ್ಕೆ ನಾವು ನಮ್ಮನ್ನು ತೊಡಗಿಸಿಕೊಂಡೆವು ಎಂದು ತಿಳಿಸಿದರು. ಬಿಜೆಪಿ ಜನೋಪಯೋಗಿ, ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಪಂಚದ ವಿವಿಧೆಡೆ ಕೋವಿಡ್ ಸಾಂಕ್ರಾಮಿಕದಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಇಂದಿಗೂ ಚೀನಾದಲ್ಲಿ ಸಾವಿರಾರು ಜನರು ಸಾಯುತ್ತಿದ್ದಾರೆ. ನಾವು ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ಕೊಟ್ಟಿದ್ದೇವೆ. ಜೀವ ರಕ್ಷಣೆ ಮಾಡಿದ್ದೇವೆ; ಇದಕ್ಕೆ ನರೇಂದ್ರ ಮೋದಿಜಿ ಕಾರಣರು ಎಂದು ಮೋದಿಜಿ ಅವರ ದೂರದೃಷ್ಟಿ ನಮ್ಮನ್ನೆಲ್ಲ ಉಳಿಸಿದೆ. ಕರ್ನಾಟಕದ ಆರೋಗ್ಯ ವ್ಯವಸ್ಥೆ ಮಾದರಿ ಆಗುವಂತೆ ಮಾಡಿದ್ದೇವೆ ಎಂದು ವಿವರಿಸಿದರು. ಕಾಂಗ್ರೆಸ್- ಜೆಡಿಎಸ್ ಅಣ್ಣತಮ್ಮಂದಿರಂತೆ. ದೇವೇಗೌಡರನ್ನು ಪ್ರಧಾನಿ ಮಾಡಿದ್ದು ನಾವೇ; ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದು ನಾವೇ ಎಂದು ಡಿ.ಕೆ.ಶಿವಕುಮಾರ್ ಮೊನ್ನೆ ಹೇಳಿದ್ದಾರೆ ಎಂದು ನೆನಪಿಸಿದರು.
ಶಾಸಕರಾದ ಎಂ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಗೋಪಿನಾಥ್, ಎನ್.ಆರ್.ರಮೇಶ್, ಸಚ್ಚಿದಾನಂದಮೂರ್ತಿ ಮತ್ತಿತರರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ