ಬೆಂಗಳೂರು: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಮಹದೇವಪುರದ ಶಂಕರ್ ಕಣ್ಣಿನ ಆಸ್ಪತ್ರೆ ಮುಂಭಾಗದ ಕುಂದಲಹಳ್ಳಿ ಗೇಟ್ ಸಿಗ್ನಲ್ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು. ನಮ್ಮ ಪ್ರಧಾನಿ ಮೋದಿಜಿ ಅವರು ಆಡಿದ್ದನ್ನೇ ಮಾಡಿ ತೋರಿಸಿದವರು ಎಂದು ನುಡಿದರು.
ದೇಶದ ಮೊದಲ ಪ್ರಜೆ ಇವತ್ತು ಮಹಿಳೆ ಎಂದು ಹೇಳಲು ನಮಗೆ ಹೆಮ್ಮೆ ಇದೆ ಎಂದರು. ದೇಶಕ್ಕೆ ಹಲವು ವರ್ಷಗಳಿಂದ ಬಜೆಟ್ ಕೊಟ್ಟವರೂ ಮಹಿಳೆ ನಿರ್ಮಲಾ ಸೀತಾರಾಮನ್ ಎನ್ನಲು ಹೆಮ್ಮೆ ಪಡುವುದಾಗಿ ತಿಳಿಸಿದರು.
ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕಾಗುತ್ತದೆ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದನ್ನು ಉಲ್ಲೇಖಿಸಿದರು. ಇದೇ ಹಿನ್ನೆಲೆಯಲ್ಲಿ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಆಗುವುದಾಗಿ ಕನಸನ್ನು ಹೊತ್ತು ದೇಶದ ಅಭಿವೃದ್ಧಿಗೆ 17-18 ಗಂಟೆ ದುಡಿಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
2014ವರೆಗೆ 10 ವರ್ಷ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ, ದೇಶವನ್ನು ಭ್ರಷ್ಟಾಚಾರದ ಸುಳಿಗೆ ಸಿಲುಕಿಸಿದರು. ಸಾವಿರಾರು ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿತ್ತು ಎಂದ ಅವರು, ಭ್ರಷ್ಟಾಚಾರದ ಕೂಸನ್ನು ಹುಟ್ಟಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ತಿಳಿಸಿದರು.
ಭಾರತವು ವಿಶ್ವದಲ್ಲಿ ಐದನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಪ್ರಮುಖ ಕಾರಣ ದೇಶದ ಮಹಿಳೆಯರು ಎಂದು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ಅಭಿಪ್ರಾಯಪಟ್ಟರು.
ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ಮುಖಂಡರಾದ ಶ್ರೀಮತಿ ಮಾಲವಿಕಾ ಅವಿನಾಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷರಾದ ಶ್ರೀಮತಿ ರೇಖಾ ಕೆ. ಗೋವಿಂದ್ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ