ಬೆಂಗಳೂರು: ಶಿವಾಜಿನಗರದಲ್ಲಿ ಇಂದು ಜನೋತ್ಸಾಹದ ವಿಜಯ ಸಂಕಲ್ಪ ಯಾತ್ರೆ ನಡೆಯಿತು. ಬಿಜೆಪಿ ಯಾತ್ರೆಯಲ್ಲಿ ಪಕ್ಷದ ನಾಯಕರ ಜೊತೆ ಭಾಗವಹಿಸಿದ್ದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.
ಗಣ್ಯರನ್ನು ಪೂರ್ಣಕುಂಭದ ಮೂಲಕ ಸ್ವಾಗತಿಸಿದ ನೂರಾರು ಮಹಿಳಾ ಕಾರ್ಯಕರ್ತೆಯರು ಬಳಿಕ ಯಾತ್ರೆಯಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿದ್ದರು. ಬಿಜೆಪಿಗೆ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಲಾಯಿತು. ಭಾರತ್ ಮಾತಾಕೀ ಜೈ, ಬಿಜೆಪಿಗೆ ಜಯವಾಗಲಿ ಘೋಷಣೆಗಳನ್ನು ಕೂಗಲಾಯಿತು. ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಈ ಅದ್ಧೂರಿ ರೋಡ್ ಷೋದಲ್ಲಿ ಪಾಲ್ಗೊಂಡಿದ್ದರು.
ರೋಡ್ ಷೋದಲ್ಲಿ ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮತ್ತು ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸಚಿವ ಎಲ್. ಮುರುಗನ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ, ರಾಜ್ಯದ ಸಚಿವರು ಮತ್ತು ಯಾತ್ರೆ-4ರ ಉಸ್ತುವಾರಿ ಆರ್ ಅಶೋಕ್, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ರಘು, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಅ.ದೇವೇಗೌಡ, ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್ ಅವರು ಭಾಗವಹಿಸಿದ್ದರು.
ಕೇಂದ್ರದ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಕೈಗೊಂಡ ಜನಹಿತದ ಕಾರ್ಯಗಳನ್ನು ಗಮನಿಸಿ ಬಿಜೆಪಿಗೆ ಮತ ಕೊಡುವಂತೆ ಮುಖಂಡರು ವಿನಂತಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ