ಬೆಂಗಳೂರು : ಭಾರತೀಯ ಜನತಾ ಪಾರ್ಟಿಯು ಮುಂದಿನ ಬಾರಿ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ಸೇರಿದಂತೆ 140ಕ್ಕೂ ಹೆಚ್ಚಿನ ಸ್ಥಾನವನ್ನು ಪಡೆಯುತ್ತದೆ. ವಿಜಯ ಸಂಕಲ್ಪ ಯಾತ್ರೆಯಿಂದ ನಮ್ಮ ಪಕ್ಷಕ್ಕೆ ಹೆಚ್ಚಿನ ಬೆಂಬಲ ದೊರೆತಿದೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಕೃಷ್ಣಾನಂದನಗರ ವೃತ್ತದ ಬಳಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ ಬಾರಿ ಚುನಾವಣೆಗಿಂತ ಹೆಚ್ಚಿನ ಅಂತರದಲ್ಲಿ ಈ ಬಾರಿ ಬಿಜೆಪಿ ಪಕ್ಷವು ಗೆಲುವು ಸಾಧಿಸಲಿದೆ. 2013 ರಿಂದ ಇಲ್ಲಿಯ ತನಕ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ತಿಳಿದಿದೆ ಎಂದು ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಶಾಲೆ, ರಸ್ತೆ, ಉದ್ಯಾನವನ ಸೇರಿದಂತೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರು ಉತ್ತಮ ಜೀವನ ನಡೆಸಲು ಬೇಕಾದಂತಹ ಎಲ್ಲಾ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಒಬಿಸಿ ಅಧ್ಯಕ್ಷರಾದ ನೆಲ ನರೇಂದ್ರ ಬಾಬು, ಮಾಜಿ ಉಪಮೇಯರ್ ಹರೀಶ್, ಹೇಮಲತಾ ಗೋಪಾಲಯ್ಯ, ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಶ್ರೀನಿವಾಸ್, ಮುಖಂಡರಾದ ರಾಜೇಂದ್ರ ಕುಮಾರ್, ಪ್ರಸನ್ನ, ಶ್ರೀನಿವಾಸ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ