ಬೆಂಗಳೂರು: ಎಸ್‍ಟಿ ಸಮುದಾಯದ ಕಲ್ಯಾಣ, ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ಹಾವೇರಿಯಲ್ಲಿ ಎಸ್‍ಟಿ ಮೋರ್ಚಾ ವತಿಯಿಂದ ನಡೆದ ಎಸ್‍ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಜಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿಯವರು ಮೀಸಲಾತಿ ಹೆಚ್ಚಳ, ಉಚಿತ ವಿದ್ಯುತ್ ಸೇರಿದಂತೆ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ನಮ್ಮದು ನುಡಿದಂತೆ ನಡೆಯುವ ಸರಕಾರ ಎಂದು ತಿಳಿಸಿದರು.
ಕಾಂಗ್ರೆಸ್ ಸುಳ್ಳು ಹೇಳುವವರ, ಭ್ರಷ್ಟಾಚಾರಿಗಳ, ಭಯೋತ್ಪಾದಕರನ್ನು ಬೆಂಬಲಿಸುವ, ಹಿಂದೂ ವಿರೋಧಿ ಪಕ್ಷ. ಕಾಂಗ್ರೆಸ್ ಅವಧಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿತ್ತು. ಆದರೆ, ಬಿಜೆಪಿ ಸರಕಾರ ಅವರ ಪಂಚತೀರ್ಥ ಕ್ಷೇತ್ರಗಳ ಅಭಿವೃದ್ಧಿ ಮಾಡಿದೆ. ರಾಜ್ಯದಲ್ಲೂ ಅವರು ಭೇಟಿ ಕೊಟ್ಟ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಪ್ರಕಟಿಸಿ ಕಾರ್ಯಪ್ರವೃತ್ತವಾಗಿದೆ. ದೇಶದೆಲ್ಲೆಡೆ ಕಾಂಗ್ರೆಸ್ ನಿರ್ನಾಮವಾಗುತ್ತಿದೆ. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಕನಿಷ್ಠ ಸ್ಥಾನ ಪಡೆಯಲಿದೆ. ಬಿಜೆಪಿ ಸಂಪೂರ್ಣ ಬಹುಮತ ಗಳಿಸಲಿದೆ ಎಂದು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಇಲ್ಲಿ ಸೇರಿದ ಜನರು, ವಿಜಯ ಸಂಕಲ್ಪ ಯಾತ್ರೆಗೆ ಸೇರುತ್ತಿರುವ ಜನಪ್ರವಾಹವೇ ಅದನ್ನು ಸಾಕ್ಷೀಕರಿಸಿದೆ ಎಂದು ವಿಶ್ವಾಸದಿಂದ ನುಡಿದರು.
ಕಾಂಗ್ರೆಸ್ ಪಕ್ಷವು ಹಿಂದುಳಿದವರು, ಎಸ್‍ಸಿ-ಎಸ್‍ಟಿ ಸಮುದಾಯವನ್ನು ಮತಬ್ಯಾಂಕಾಗಿ ಮಾಡಿಕೊಂಡಿತ್ತು. ಈಗ ಈ ಸಮುದಾಯಗಳು ಕಾಂಗ್ರೆಸ್ ಪಕ್ಷದಿಂದ ದೂರ ಸರಿದಿವೆ. ಬಿಜೆಪಿಯ ಜನಪರ- ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಥ ಮಾಡಿಕೊಂಡು ಬಿಜೆಪಿಯನ್ನು ಬೆಂಬಲಿಸುತ್ತಿವೆ ಎಂದು ತಿಳಿಸಿದರು.
ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಮಹೇಶ್ ಟೆಂಗಿನಕಾಯಿ, ಪಕ್ಷದ ಪದಾಧಿಕಾರಿಗಳು, ಮೋರ್ಚಾದ ಮುಖಂಡರು, ಜನಪ್ರತಿನಿಧಿಗಳು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ