ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ನಡೆಸಲಿದೆ ಎಂದು ಮಾಜಿ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಉಡುಪಿ ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದ ಪರಿಸ್ಥಿತಿ ಇತ್ತು. ಈಗ ಪ್ರತಿ ಕ್ಷೇತ್ರಕ್ಕೆ 10ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಇದು ಪಕ್ಷದ ಸದೃಢತೆ ಮತ್ತು ಬೆಳವಣಿಗೆಗೆ ಸ್ಪಷ್ಟ ಉದಾಹರಣೆ ಎಂದು ಅಭಿಪ್ರಾಯಪಟ್ಟರು.
ಹಿಂದೆ ಪಕ್ಷಕ್ಕೆ ಜನರು ಪೂರ್ಣ ಬಹುಮತ ಕೊಟ್ಟಿರಲಿಲ್ಲ. ಈ ಬಾರಿ ಸಂಪೂರ್ಣ ಬಹುಮತ ಪಡೆಯಲು ರಥಯಾತ್ರೆ ನೆರವಾಗಲಿದೆ ಎಂದು ನುಡಿದರು. ಕೇಂದ್ರದಲ್ಲಿ ಮೋದಿಜಿ ಮತ್ತಿತರ ವಿಶ್ವನಾಯಕರ ನೇತೃತ್ವ, ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್‍ಕುಮಾರ್ ಕಟೀಲ್ ಅವರ ಮೂಲಕ ಬಿಜೆಪಿ ನೇತೃತ್ವವನ್ನು ಜನತೆ ಗಮನಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ- ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಲಿದ್ದೇವೆ. ಕಾಂಗ್ರೆಸ್ಸಿನ ಭ್ರಷ್ಟಾಚಾರದ ಜನರ ಮುಂದಿಡುವುದು ಬಿಜೆಪಿ ಗೆಲುವಿಗೆ ನೆರವಾಗಲಿದೆ. ತಿಹಾರ್ ಜೈಲಿಗೆ ಹೋಗಿ ಬಂದ ಡಿ.ಕೆ.ಶಿವಕುಮಾರ್, ರೀಡೂ ಮೂಲಕ ಸಿದ್ದರಾಮಯ್ಯರ ಭ್ರಷ್ಟ ಆಡಳಿತ ಸೇರಿದಂತೆ ಕಾಂಗ್ರೆಸ್ ವೈಫಲ್ಯವನ್ನು ಜನರಿಗೆ ತಿಳಿಸಲಿದ್ದೇವೆ ಎಂದು ಅವರು ತಿಳಿಸಿದರು.
ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಉಪಸ್ಥಿತರಿದ್ದರು. ಕಾಪುವಿನಲ್ಲಿ ಬೈಕ್ ರ್ಯಾಲಿ, ವಿವಿಧೆಡೆ ನಡೆದ ರೋಡ್ ಷೋದಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಹಿರಿಯ ಮುಖಂಡ ಡಾ.ವಿ.ಎಸ್.ಆಚಾರ್ಯ ಅವರ ಪ್ರತಿಮೆಗೆ ಪಕ್ಷದ ಮುಖಂಡರು ಮಾಲಾರ್ಪಣೆ ಮಾಡಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ