ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವ ಬಿಜೆಪಿ, ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡುಯ್ಯವ ಗುರಿ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಗೆಲುವು ಖಚಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಹುನಗುಂದ ಮತಕ್ಷೇತ್ರದ ಇಳಕಲ್‍ನಲ್ಲಿ ಇಂದು ರೋಡ್ ಷೋ ನಂತರ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿ, ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ, ಮುಂಗಾರಿನಲ್ಲಿ ಬಿತ್ತನೆಗೆ ರೈತರಿಗೆ 10 ಸಾವಿರ ರೂ, ಎಸ್ಸಿ-ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಿದ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಗೆಲ್ಲಿಸಿ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿ ಎಂದು ವಿನಂತಿಸಿದರು.
ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಅಖಂಡ ವಿಜಯಪುರ ಜಿಲ್ಲೆಯಲ್ಲಿರುವ ರೈತರ ಕಲ್ಯಾಣಕ್ಕಾಗಿ 10 ಸಾವಿರ ಕೋಟಿ ಮಂಜೂರು ಮಾಡಿದ್ದು ಬಿಜೆಪಿ; ಬಿಜೆಪಿ ಸರ್ಕಾರಕ್ಕೆ ನಿಮ್ಮ ಆಶೀರ್ವಾದ ಇರಲಿ ಎಂದರು.
ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ರೈತರ ಕಲ್ಯಾಣಕ್ಕಾಗಿ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ. ಯಾವುದೇ ಸೋರಿಕೆಯಿಲ್ಲದೇ 10 ಸಾವಿರ ರೂಪಾಯಿಗಳನ್ನು ಪ್ರತಿ ವರ್ಷ ರೈತರಿಗೆ ನೀಡುತ್ತಿದೆ. ಮಹಿಳೆಯ ಕಲ್ಯಾಣ, ಹಿಂದುಳಿದ ವರ್ಗದವರ ಅಭಿವೃದ್ಧಿ ಕಾರ್ಯದಲ್ಲಿ ಮುನ್ನಡೆದಿರುವ ಬಿಜೆಪಿಗೆ ನಿಮ್ಮ ಬೆಂಬಲವಿರಲಿ. ಹುನಗುಂದ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಬಿಜೆಪಿಗೆ ಅವಕಾಶ ನೀಡಿ ಎಂದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ನೈತಿಕತೆ ಕಳೆದುಕೊಂಡ ವಿಜಯಾನಂದ ಕಾಶಪ್ಪನವರ ಅವರಿಗೆ ಮತ ಕೇಳುವ ನೈತಿಕತೆಯಿಲ್ಲ, ಅವರನ್ನು ಮತ್ತೊಮ್ಮೆ ಮಾಜಿ ಮಾಡಿ ಬಿಜೆಪಿಗೆ ಮತನೀಡಿ ಬಿಜೆಪಿ ಗೆಲ್ಲಿಸಿ. 2023 ಕ್ಕೆ ಬಿಜೆಪಿ ಸರ್ಕಾರ ರಚನೆ ಖಚಿತ ಎಂದರು.
ಸಚಿವ ಭೈರತಿ ಬಸವರಾಜ, ಸಂಸದ ಪಿಸಿ ಗದ್ದಿಗೌಡರ ಮಾತನಾಡಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ಮಾಜಿ ಶಾಸಕ ಎಸ್.ಕೆ.ಬೆಳ್ಳುಬ್ಬಿ, ನಾರಾಯಣ ಬಾಂಡಗೆ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಇದ್ದರು.
ಹುನಗುಂದ ಹಾಗೂ ಇಳಕಲ್ ದಲ್ಲಿ ವಾದ್ಯ ಮೇಳದೊಂದಿದಗೆ ಸಹಸ್ರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ವಿಜಯ ಸಂಕಲ್ಪ ಯಾತ್ರೆಯನ್ನು ಬರಮಾಡಿಕೊಂಡರು. ವಿಜೃಂಭಣೆಯಿಂದ ರೋಡ್ ಷೋ ನಡೆಯಿತು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ