ಬೆಂಗಳೂರು: ಬಾಗೇಪಲ್ಲಿಯ ಗುಡಿಬಂಡೆಯಲ್ಲಿ ವಿಜಯ ಸಂಕಲ್ಪ ರಥಯಾತ್ರೆ ರೋಡ್ ಷೋ ಅದ್ಧೂರಿಯಾಗಿ ನಡೆಯಿತು. ಪಕ್ಷದ ಮುಖಂಡರು, ಸಾವಿರಾರು ಜನ ಕಾರ್ಯಕರ್ತರು, ಸಾರ್ವಜನಿಕರು ಈ ಯಾತ್ರೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ ಸಚಿವರಾದ ಡಾ.ಸುಧಾಕರ್, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಎಂ.ಟಿ.ಬಿ.ನಾಗರಾಜ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಸಚ್ಚಿದಾನಂದ ಮೂರ್ತಿ ಅವರು ಭಾಗವಹಿಸಿದ್ದರು.
ಸಚಿವರು- ಮುಖಂಡರು ಮಾತನಾಡಿ, ಕೇಂದ್ರದ ಸಹಕಾರದೊಂದಿಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಶ್ರಮಿಸಿದೆ. ಕೋಲಾರದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನೂ ಜಾರಿಗೊಳಿಸಿದೆ. ಇದನ್ನು ಗಮನಿಸಿ ಈ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಜನತೆ ಮತ ಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ