ಬೆಂಗಳೂರು: ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಮುಳುಗಲಿದೆ. ಅದರಿಂದ ದೇಶಕ್ಕೆ ಮತ್ತು ನಾಡಿಗೆ ಒಳ್ಳೆಯದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕೊರಟಗೆರೆಯಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಅದು ಮುಳುಗಿ ಸಂಪೂರ್ಣವಾಗಿ ಎಲ್ಲರನ್ನು ಮುಳುಗಿಸಲಿದೆ. ಅದು ಈಗಾಗಲೇ ಉತ್ತರಪ್ರದೇಶ, ಗುಜರಾತ್, ಪಂಜಾಬ್, ಹರಿಯಾಣ ಸೇರಿ ಎಲ್ಲ ಕಡೆ ಮುಳುಗಿದೆ ಎಂದು ತಿಳಿಸಿದರು.
ವಿಶ್ವವಂದ್ಯ ನಾಯಕ ನರೇಂದ್ರ ಮೋದಿಜಿ ಅವರ ಕೈ ಬಲಪಡಿಸಿ. ಅವರು ದೇಶಭಕ್ತ. ಅವರು ವಿಶ್ವಮನ್ನಣೆಯ ನಾಯಕ. ಇಡೀ ಜಗತ್ತು ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿದೆ. ಪಾಕಿಸ್ತಾನವು ಮೋದಿ ಅವರ ನಾಯಕತ್ವ ಬಯಸುತ್ತಿದೆ. ಚೀನಾದ ಜನರೂ ಭಾರತದ ಆಡಳಿತ, ಮೋದಿಜಿ ನಾಯಕತ್ವವನ್ನು ಬಯಸುತ್ತಾರೆ ಎಂದರು.
ಇಂಗ್ಲೆಂಡಿನಲ್ಲಿ ರಾಹುಲ್ ಗಾಂಧಿ ಅವರು ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದ್ದಾರೆ. ಈ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದವರು, ವಿರೋಧ ಪಕ್ಷದವರನ್ನು ಜೈಲಿಗೆ ಹಾಕಿದವರು, ಪತ್ರಿಕೆಗಳನ್ನು ಬಂದ್ ಮಾಡಿ ಸ್ವಾತಂತ್ರ್ಯ ಹರಣ ಮಾಡಿದವರು ಕಾಂಗ್ರೆಸ್ಸಿಗರು. ಅಂಥವರಿಗೆ ಮತ ಹಾಕದಿರಿ ಎಂದು ಮನವಿ ಮಾಡಿದರು.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರದ್ದೇ ಅವರಿಗೆ ಗ್ಯಾರಂಟಿ ಇಲ್ಲ. ಅವರು ಜನರಿಗೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಜನರನ್ನು ಯಾಮಾರಿಸಲು ಬೊಗಳೆ ಬಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನದು ಬೊಗಳೆ ಭರವಸೆಯ ವಿಸಿಟಿಂಗ್ ಕಾರ್ಡ್ ಅಷ್ಟೇ ಎಂದು ತಿಳಿಸಿದರು. ಇದಕ್ಕೆ ಬೆಲೆ ಇಲ್ಲ. ಜನರನ್ನು ಪದೇಪದೇ ಮೋಸ ಮಾಡಲಾಗದು ಎಂದು ಕಾಂಗ್ರೆಸ್ಸಿನವರು ಅರ್ಥ ಮಾಡಿಕೊಳ್ಳಲಿ ಎಂದರು.
ಕಮಲ ಅರಳಿಸಲು ವಿನಂತಿಸಿದ ಅವರು, ಕಿಸಾನ್ ಸಮ್ಮಾನ್ ಯೋಜನೆ, ವಿದ್ಯಾನಿಧಿ, ಸಂಧ್ಯಾ ಸುರಕ್ಷಾ ಸೇರಿ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ಜನಕಲ್ಯಾಣ ಸರಕಾರವನ್ನು ಕರ್ನಾಟಕದಲ್ಲಿ ಸ್ಥಾಪಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ಸಿಗರು ಮೀಸಲಾತಿ ಕುರಿತು ಮಾತನ್ನಷ್ಟೇ ಆಡಿದ್ದಾರೆ. ನಾವು 40 ವರ್ಷಗಳ ಮೀಸಲಾತಿ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ತಿಳಿಸಿದರು. ಸಂಸದ ಬಸವರಾಜ್, ಸಚಿವರಾದ ಆರ್.ಅಶೋಕ್, ಬಿ.ಸಿ.ನಾಗೇಶ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಯಾತ್ರೆ ಸಂಚಾಲಕ ಸಚ್ಚಿದಾನಂದಮೂರ್ತಿ, ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮತ್ತಿತರರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ