ಬೆಂಗಳೂರು: ಕಡೂರಿನಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಅದ್ಧೂರಿ ರಥಯಾತ್ರೆ ನಡೆಯಿತು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಚಿವ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ಸಂಚಾಲಕ ರಾಜೇಂದ್ರ, ಸ್ಥಳೀಯ ಮುಖಂಡರು, ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಬಿಜೆಪಿ ಈ ಬಾರಿ ಸಂಪೂರ್ಣ ಬಹುಮತದಿಂದ ಗೆಲ್ಲಲಿದೆ. ಕಾರ್ಯಕರ್ತರ ಶ್ರಮ ಮತ್ತು ಅಭಿವೃದ್ಧಿ ಕಾರ್ಯಗಳ ನೆರವಿನಿಂದ ಪಕ್ಷಕ್ಕೆ ಜನಬೆಂಬಲ ಸಿಗುತ್ತಿದೆ ಎಂದು ತಿಳಿಸಿದರು.
ಕಾರ್ಯಕರ್ತರು ಭಾರತ್ ಮಾತಾಕೀ ಜೈ, ವಂದೇ ಮಾತರಂ, ಬಿಜೆಪಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತ ಸಾಗಿದರು. ವಾದ್ಯಮೇಳ, ಚಂಡೆಮೇಳ, ಯಕ್ಷಗಾನ ವೇóಷಧಾರಿಗಳು, ಗೊಂಬೆ ಕುಣಿತ ತಂಡದವರು ರೋಡ್ ಷೋದಲ್ಲಿ ಪಾಲ್ಗೊಂಡು ಮತದಾರರನ್ನು ಆಕರ್ಷಿಸಿದರು. ಬಿಜೆಪಿ ಸರಕಾರಗಳ ಸಾಧನೆಯನ್ನು ಪರಿಗಣಿಸಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿನಂತಿಸಲಾಯಿತು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ