ಬೆಂಗಳೂರು: ಬಿಜೆಪಿಯ ಸಾಧನೆಗಳು, ನರೇಂದ್ರ ಮೋದಿಜಿ ಅವರು ಪ್ರಧಾನಿಯಾದ ಬಳಿಕ ಕೊಟ್ಟಿರುವ ಅನೇಕ ಜನಪರ ಯೋಜನೆಗಳ ಮಾಹಿತಿಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ವಿಜಯ ಸಂಕಲ್ಪ ರಥಯಾತ್ರೆ ನಡೆಯುತ್ತಿದೆ. ಕೇಂದ್ರ- ರಾಜ್ಯ ಸರಕಾರಗಳ ಅನೇಕ ಯೋಜನೆಗಳನ್ನು ತಿಳಿಸಲಾಗುತ್ತಿದೆ ಎಂದು ಕೇಂದ್ರದ ಸಚಿವ ನಾರಾಯಣಸ್ವಾಮಿ ಅವರು ತಿಳಿಸಿದರು.
ಪಾವಗಡದಲ್ಲಿ ಇಂದು ವಿಜಯ ಸಂಕಲ್ಪ ರಥಯಾತ್ರೆ ರೋಡ್ ಷೋ ಸಂಭ್ರಮ ಮತ್ತು ಉತ್ಸಾಹದಿಂದ ನಡೆಯಿತು. ಈ ಸಂದರ್ಭದಲ್ಲಿ ನಾರಾಯಣಸ್ವಾಮಿ ಅವರು ಮಾತನಾಡಿ, ಆಯುಷ್ಮಾನ್ ಭಾರತ್, ಮನೆಮನೆಗೆ ನಳ್ಳಿ ನೀರು, ಮನೆ, ಶೌಚಾಲಯ, ಕೋವಿಡ್ ಲಸಿಕೆ, ಅನ್ನಭಾಗ್ಯ ಮತ್ತಿತರ ಯೋಜನೆಗಳನ್ನು ಗಮನಿಸಿ ಜನತೆ ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.
ಭದ್ರಾ ಯೋಜನೆಗೆ 5,300 ಕೋಟಿ ಕೊಡಲಾಗಿದೆ. ಎತ್ತಿನಹೊಳೆ ನೀರೂ ಬರಲಿದೆ. ಮನೆಮನೆಗೆ ನಳ್ಳಿ ನೀರು ಕೊಡುತ್ತೇವೆ ಎಂದು ತಿಳಿಸಿದರು. ಬೊಮ್ಮಾಯಿಯವರು ಅನೇಕ ಯೋಜನೆಗಳನ್ನು ಜನರಿಗೆ ನೀಡಿದ್ದಾರೆ ಎಂದು ವಿವರಿಸಿದರು.
ರಾಜ್ಯದ ಸಚಿವ ಆರ್.ಅಶೋಕ್ ಅವರು ಮಾತನಾಡಿ, 50 ವರ್ಷ ಕಾಂಗ್ರೆಸ್ಸಿಗೆ ಮತ ನೀಡಿದ್ದೀರಿ. ಜೆಡಿಎಸ್‍ಗೂ ಅವಕಾಶ ಕೊಟ್ಟಿದ್ದೀರಿ. ಕಾಂಗ್ರೆಸ್-ಜೆಡಿಎಸ್ ಕಳ್ಳ ಮಳ್ಳರಂತೆ ಎಂದು ಟೀಕಿಸಿದರು. ಮೋದಿಯವರು ಇರುವವರೆಗೆ ಕರ್ನಾಟಕ, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು. ಪಕ್ಷದ ಮುಖಂಡರು, ಸಾವಿರಾರು ಜನ ಕಾರ್ಯಕರ್ತರು, ಸಾರ್ವಜನಿಕರು ಈ ಯಾತ್ರೆಯಲ್ಲಿ ಭಾಗವಹಿಸಿದ್ದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಯಾತ್ರೆ ಸಂಚಾಲಕ ಸಚ್ಚಿದಾನಂದ ಮೂರ್ತಿ, ಜಿಲ್ಲಾ ಅಧ್ಯಕ್ಷ ಮಂಜುನಾಥ್ ಮತ್ತಿತರರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ