ಬೆಂಗಳೂರು: ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಯನ್ನು ಗಮನಿಸಿ ಕಮಲ ಚಿಹ್ನೆಗೆ ಮತ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ; ಕರ್ನಾಟಕದ ಅಭಿವೃದ್ಧಿಗೆ ಸಹಕರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು.
ತಿಪಟೂರಿನಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆ ರೋಡ್ ಷೋದಲ್ಲಿ ಭಾಗವಹಿಸಿದ ಅವರು ಸಭೆಯಲ್ಲಿ ಮಾತನಾಡಿ, ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದೆ. ಆದ್ದರಿಂದ ಹೆಚ್ಚು ಜಾಗರೂಕರಾಗಿ ಮತದಾನದ ಹಕ್ಕು ಚಲಾಯಿಸಿ ಎಂದು ವಿನಂತಿಸಿದರು.
ಪ್ರಧಾನಿ ನರೇಂದ್ರ ಮೋದಿಜಿ ಅವರು 80 ಕೋಟಿ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ಉಚಿತ ಪಡಿತರ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯಡಿ ಲಕ್ಷಾಂತರ ರೈತರಿಗೆ ಪ್ರಯೋಜನ ಸಿಗುತ್ತಿದೆ. 13 ಕೋಟಿ ಶೌಚಾಲಯ ನಿರ್ಮಾಣ ಸೇರಿದಂತೆ ದೇಶದ ಎಲ್ಲ ನಾಗರಿಕರಿಗೆ ಪ್ರಯೋಜನವಾಗುವ ಯೋಜನೆಗಳನ್ನು ಮೋದಿಜಿ ಜಾರಿಗೊಳಿಸಿದ್ದಾರೆ. ಇದನ್ನು ಗಮನಿಸಿ, ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನೇ ಬೆಂಬಲಿಸಲು ಮನವಿ ಮಾಡಿದರು.
ಕರ್ನಾಟಕದಲ್ಲಿ ಎಕ್ಸ್‍ಪ್ರೆಸ್ ವೇ, ರೈಲ್ವೆ ಆಧುನೀಕರಣ, ಗ್ರಾಮಗಳಿಗೂ ಇಂಟರ್‍ನೆಟ್, ವಿಮಾನನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ಕಾಂಗ್ರೆಸ್ ಪಾರ್ಟಿ ಎಂದರೆ ಕಮಿಷನ್, ಭ್ರಷ್ಟಾಚಾರ, ಅಪರಾಧೀಕರಣ, ಪರಿವಾರವಾದದ ಇನ್ನೊಂದು ಮುಖ. ಆದರೆ, ಬಿಜೆಪಿ ವಿಕಾಸವಾದದ (ಅಭಿವೃದ್ಧಿ) ಪರವಾಗಿದೆ ಎಂದು ವಿವರಿಸಿದರು.
ಬಿಜೆಪಿ ರೋಡ್ ಷೋಗಳು ಅಪಾರ ಜನಸಂದಣಿಯ ಸಭೆಯಾಗಿ ಪರಿವರ್ತಿತವಾಗುತ್ತಿವೆ. ಯಡಿಯೂರಪ್ಪ- ಬಸವರಾಜ ಬೊಮ್ಮಾಯಿಯವರ ಸರಕಾರ ಅನೇಕ ಉತ್ತಮ ಯೋಜನೆಗಳನ್ನು ಜನತೆಗೆ ಕೊಟ್ಟಿದೆ. ರಾಜ್ಯ ಮತ್ತು ದೇಶ ಸುರಕ್ಷಿತವಾಗಿರಲು ಬಿಜೆಪಿಗೆ ಮತ ಕೊಡಿ ಎಂದರು.
ಈಶಾನ್ಯದ ಮೂರು ರಾಜ್ಯಗಳಲ್ಲಿ ಎನ್‍ಡಿಎ, ಬಿಜೆಪಿ ಸರಕಾರ ರಚನೆಯಾಗಿದೆ. ಕಾಂಗ್ರೆಸ್ ಹೀನಾಯ ಸೋಲಿಗೆ ಸಿಲುಕಿದೆ ಎಂದ ಅವರು, ರಾಹುಲ್ ಗಾಂಧಿಯವರು ಇಂಗ್ಲೆಂಡಿನಲ್ಲಿ ಭಾರತದ ಪ್ರಜಾಪ್ರಭುತ್ವ ಆತಂಕದಲ್ಲಿದೆ ಎಂದು ಹೇಳಿದ್ದಾರೆ ಎಂದು ಆಕ್ಷೇಪಿಸಿದರು. ಅವರ ಈ ಮಾತಿಗೆ ತಕ್ಕ ಉತ್ತರ ಕೊಡಿ; ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಮತ್ತೆ ಅಧಿಕಾರದ ರಜೆ ಕೊಡಿ ಎಂದು ವಿನಂತಿಸಿದರು.
ಪ್ರಧಾನಿ ಅವರನ್ನು ಮುಗಿಸಲು ಕಾಂಗ್ರೆಸ್ ಪ್ರಯತ್ನ ಪಡುತ್ತಿದೆ; ಆದರೆ ಕರ್ನಾಟಕ ರಾಜ್ಯವನ್ನು ಉದ್ದಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಪಡುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಬಿಜೆಪಿಯನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದರು. ವಿದೇಶಿ ನೇರ ಹೂಡಿಕೆ (ಎಫ್‍ಡಿಐ), ಸ್ಟಾರ್ಟಪ್ ವಿಚಾರದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಇದನ್ನು ಗಮನದಲ್ಲಿ ಇಟ್ಟು ಕಮಲ ಅರಳುವಂತೆ ಮಾಡಿ ಎಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯದಾದ್ಯಂತ ಬಿಜೆಪಿ ಅಲೆ ಇದೆ. ನರೇಂದ್ರ ಮೋದಿಜಿ ಅವರ ಕಾರ್ಯವೈಖರಿ, ಸಾಧನೆ, ಅಭಿವೃದ್ಧಿ ಕಾರ್ಯಗಳು, ರಾಜ್ಯದ ಬಿಜೆಪಿ ಸರಕಾರದ ಕೆಲಸಗಳನ್ನು ಗಮನಿಸಿ ಜನತೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ನುಡಿದರು. 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿಗರ ಅಧಿಕಾರದ ಕನಸು ಕೇವಲ ತಿರುಕನ ಕನಸಾಗಲಿದೆ ಎಂದು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ನಾಗೇಶ್, ಯಾತ್ರೆ ಸಂಚಾಲಕ ಸಚ್ಚಿದಾನಂದ ಮೂರ್ತಿ, ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿಲ್ಲಾ ಅಧ್ಯಕ್ಷ ರವಿಶಂಕರ್ ಎಚ್.ಎಸ್. ಮತ್ತಿತರರು ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ