ಬೆಂಗಳೂರು: ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲೆಸೆತದ ದುಷ್ಕೃತ್ಯ ಖಂಡನೀಯ. ಕಿಡಿಗೇಡಿಗಳ ಈ ಕುಕೃತ್ಯವನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇಂಥ ದುಷ್ಕೃತ್ಯಕ್ಕೆ ಯಾರೂ ಬೆಂಬಲ ಕೊಡಬಾರದು. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಅವರು ತಿಳಿಸಿದ್ದಾರೆ. ಇದು ಸಂವಿಧಾನಕ್ಕೆ ಅಗೌರವ ತರುವ ಕಾರ್ಯವಾಗಿದೆ. ಯಾರೇ ತಪ್ಪು ಮಾಡಿದ್ದರೂ ಅದನ್ನು ಸರಕಾರ ಪತ್ತೆ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಮೀಸಲಾತಿಯ ವಿಚಾರದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಅತ್ಯಂತ ವಿವೇಚನಾಪೂರ್ಣ ನಿರ್ಣಯ ಪ್ರಕಟಿಸಿದೆ. ಇದನ್ನು ಎಲ್ಲ ಸಮುದಾಯದವರು ಅರ್ಥ ಮಾಡಿಕೊಂಡು ಶಾಂತಿ ಕಾಪಾಡಬೇಕು. ಒಳ ಮೀಸಲಾತಿ ಬಗ್ಗೆ ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ