ಬೆಂಗಳೂರು: ಇಡೀ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದ್ದು, ಅಭ್ಯರ್ಥಿ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಬಳ್ಳಾರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಭಿಪ್ರಾಯ ಸಂಗ್ರಹದ ಮಾನದಂಡವನ್ನು ಆಧಾರವಾಗಿ ಇಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರಿಯಲಿದೆ. ಹಾಗಾಗಿ ಇಲ್ಲಿಗೆ ನಾನು, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಬಂದಿದ್ದೇವೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದರು.
ಒಂದು ವಾರದಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ರಾಜೀನಾಮೆ ನೀಡಲು ಸ್ಪೀಕರ್ ಬಳಿ ತೆರಳಿದ ಕುರಿತು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅವರ ಜೊತೆ ಮಾತುಕತೆ ಆಗಿತ್ತು. ಈ ಕುರಿತು ಪರಿಶೀಲಿಸುತ್ತೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಚುನಾವಣೆ ಬಂದಾಗ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವುದು ರಾಜಕಾರಣದಲ್ಲಿ ಸಹಜ. ಹಾಗಾಗಿ ಅವರು ಯಾವುದೋ ಅಭಿಪ್ರಾಯದಲ್ಲಿ ತೆರಳಿರಬಹುದು. ಗೋಪಾಲಕೃಷ್ಣರ ಜೊತೆ ಯಾರೂ ಹೋಗುವುದಿಲ್ಲ. ಹಾಗೇ ನಮ್ಮ ಪಕ್ಷಕ್ಕೆ ಬರಲು ತುಂಬಾ ಜನರು ಸಿದ್ಧರಿದ್ದಾರೆ ಎಂದು ಪ್ರಶ್ನೆಗಳಿಗೆ ಉತ್ತರ ಕೊಟ್ಟರು.
ಚುನಾವಣಾ ಪ್ರಕ್ರಿಯೆಯಲ್ಲಿ ನಾವು ಮುಂದಿದ್ದೇವೆ. ವಾತಾವರಣ ನಮ್ಮ ಪರವಾಗಿದೆ. ಜನರ ಒಲವು ನಮ್ಮ ಕಡೆಗಿದೆ. ವಿಜಯ ಸಂಕಲ್ಪ ಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಗೆ ಕ್ಷೇತ್ರಕ್ಕಾಗಿ ಪರದಾಡುವ ಸ್ಥಿತಿ ಇದೆ. ಹಾಗಾಗಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಾಣಲಿದೆ ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ