ಬೆಂಗಳೂರು: ಭ್ರಷ್ಟರಿರುವ ಮತ್ತು ಭ್ರಷ್ಟಾಚಾರವನ್ನೇ ಸದಾ ಪ್ರೋತ್ಸಾಹಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವ ಮೊದಲು ಯೋಚನೆ ಮಾಡಿ; ಅಭಿವೃದ್ಧಿಪರ ಬಿಜೆಪಿಗೆ ಮತದಾನ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರರು ಮತ್ತು ರಾಜ್ಯಸಭಾ ಸದಸ್ಯ ಜಿ. ವಿ. ಎಲ್. ನರಸಿಂಹರಾವ್ ಅವರು ಮನವಿ ಮಾಡಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡೈರಿಗಳು ಮತ್ತು ಹಿಂದಿನ ತನಿಖೆಗಳು ಇಲ್ಲಿಂದ 24 ಅಕ್ಬರ್ ರಸ್ತೆಯ ನಿವಾಸಕ್ಕೆ ಹೇಗೆ ಹಣ ಹರಿಯುತ್ತಿತ್ತು ಎಂಬುದನ್ನು ಹೊರಗೆಡಹಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆ ಇದ್ದರೆ ಅದು ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಬಾರದು. ಅದು ಒಂದು ಬೆರಳನ್ನು ನಮ್ಮತ್ತ ತೋರಿಸಿದರೆ, ನಾಲ್ಕು ಬೆರಳುಗಳು ಅವರತ್ತ ಇರುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುತ್ತದೆ. ಆದರೆ, ಬಿಜೆಪಿ ಅಗತ್ಯ ಇರುವಲ್ಲೆಲ್ಲ ತನಿಖೆ ಮಾಡಿದೆ. ತನ್ನ ಪ್ರಾಮಾಣಿಕತೆಯ ಬದ್ಧತೆಯನ್ನು ತೋರಿಸಿದೆ ಎಂದು ವಿವರಿಸಿದರು. ಬಿಜೆಪಿ ಅಧಿಕಾರದಲ್ಲಿ ಇರುವಾಗ ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಗರಿಷ್ಠ ಅನುದಾನ ಹರಿದು ಬಂದಿದೆ. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ರಾಜ್ಯದಿಂದ ಆ ಪಕ್ಷಕ್ಕೆ ಹಣ ಹರಿಯುತ್ತಿತ್ತು ಎಂದು ಟೀಕಿಸಿದರು.
ನರೇಂದ್ರ ಮೋದಿಯವರು ವಿಶ್ವನಾಯಕರಾಗಿ ಹೊರಹೊಮ್ಮಿದ್ದು, ಆ ಕುರಿತು ಕನ್ನಡಿಗರು ಮತ್ತು ದೇಶದ ಪ್ರತಿಯೊಬ್ಬರೂ ಹೆಮ್ಮೆ ಪಡುತ್ತಿದ್ದಾರೆ. ನಮ್ಮ ದೇಶವು 9 ವರ್ಷಗಳ ಬಿಜೆಪಿ ಆಡಳಿತದಲ್ಲಿ 11ನೇ ಬೃಹತ್ ಆರ್ಥಿಕ ಶಕ್ತಿ ಎಂಬಲ್ಲಿಂದ 6ನೇ ಬೃಹತ್ ಆರ್ಥಿಕ ಶಕ್ತಿಯಾಗಿ ಪರಿವರ್ತನೆಗೊಂಡಿದೆ ಎಂದು ಮೆಚ್ಚುಗೆ ಸೂಚಿಸಿದರು.
ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದ್ದರೆ ಇದು ಇನ್ನು 90 ವರ್ಷಗಳಲ್ಲೂ ಸಾಧ್ಯವಾಗುತ್ತಿರಲಿಲ್ಲ ಎಂದ ಅವರು, ನಮ್ಮ ದೇಶವು ಮುಂದಿನ ವರ್ಷಗಳಲ್ಲಿ ವಿಶ್ವದ ಇನ್ನಷ್ಟು ಬಲಿಷ್ಠ ಆರ್ಥಿಕ ಶಕ್ತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯಿಂದ ಆಗುತ್ತಿರುವ ಪ್ರಗತಿ, ಸರ್ವತೋಮುಖ ಅಭಿವೃದ್ಧಿಯ ಅರಿವು ಜನತೆಗೆ ಇದೆ. ಕರ್ನಾಟಕವು ದೇಶದಲ್ಲೇ ಅತ್ಯುತ್ತಮ ಮೂಲಭೂತ ಸೌಕರ್ಯವನ್ನು ಹೊಂದಿದೆ. ಇದು ಮೋದಿಜಿ ಅವರ ಬೆಂಬಲದಿಂದ ಸಾಧ್ಯವಾಗಿದೆ ಎಂದು ನುಡಿದರು.
ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ