ಬೆಂಗಳೂರು: ಕಾಂಗ್ರೆಸ್ ನಾಯಕ ಮತ್ತು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.
ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜ್‍ನಲ್ಲಿ “ಪೆನ್ ಹಿಡಿದು ದೇಶದ ಭವಿಷ್ಯ ಉಜ್ವಲಗೊಳಿಸಬೇಕಾದ ಯುವಕರಿಗೆ ಆಯುಧಗಳನ್ನು ನೀಡಿ ಅವರ ಭವಿಷ್ಯವನ್ನು ಬಿಜೆಪಿ ಹೇಗೆ ಹಾಳುಗೆಡವಿದೆ ಎನ್ನುವುದಕ್ಕೆ ನಿನ್ನೆ ಸಾತನೂರಿನ ಬಳಿ ನಡೆದ ಘಟನೆಯೇ ಸಾಕ್ಷಿ” ಎಂದು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅಲ್ಲದೆ, ಒಂದು ಜನಾಂಗದ ಮತದಾರರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಅವರು ಚುನಾವಣೆ ಸಂದರ್ಭದಲ್ಲಿ ಆಧಾರರಹಿತವಾಗಿ ಗಂಭೀರ ಆರೋಪ ಮಾಡಿದ್ದು, ಇದರ ಹಿಂದೆ ಮತದಾರರ ಮೇಲೆ ಪ್ರಭಾವ ಬೀರುವ ಸಂಚು ಇದೆ ಎಂದು ಗಮನ ಸೆಳೆಯಲಾಗಿದೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕೀಲ ಪ್ರಕೋಷ್ಟದ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರು ಈ ದೂರು ನೀಡಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ