ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಬತ್ತಳಿಕೆಯಲ್ಲಿ ಅಸ್ತ್ರಗಳೇ ಉಳಿದಿಲ್ಲ ಎಂದು ಎಸ್.ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾಧಿ ನಾರಾಯಣಸ್ವಾಮಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೇ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಅಮುಲ್-ನಂದಿನಿ ವಿಲೀನ ಎಂಬ ಸುಳ್ಳು ವಿಚಾರವನ್ನು ಚುನಾವಣಾ ಅಸ್ರ್ತವಾಗಿ ಮುಂದುವರೆಸಿದ್ದಾರೆ. ಅದರೆ ಇದು ಫ್ಲಾಪ್ ಷೋ ಎಂದು ಟೀಕಿಸಿದರು.
ಈ ಎರಡು ಪಕ್ಷಗಳಿಗೂ ಚುನಾವಣೆ ಎದುರಿಸಲು ವಿಷಯಗಳೇ ಉಳಿದಿಲ್ಲ ಎಂದು ಆರೋಪಿಸಿದರು. ಕೆಲವು ಸಮಯದ ಹಿಂದೆ ಕೇಂದ್ರ ಮತ್ತು ಗೃಹ ಸಹಕಾರ ಸಚಿವ ಅಮಿತ್ ಶಾ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದರು. ಆಗ ಅವರು ತಮ್ಮ ಭಾಷಣದಲ್ಲಿ ಅಮುಲ್-ನಂದಿನಿ ನಡುವಿನ ತಾಂತ್ರಿಕ ಹಾಗೂ ಮಾರುಕಟ್ಟೆ ಸಹಕಾರದ ವಿಚಾರವಾಗಿ ಪ್ರಸ್ತಾಪಿಸಿದ್ದರು. ಇದರಿಂದ ನಂದಿನಿ ಸಂಸ್ಥೆ ಇನ್ನಷ್ಟು ವಿಶಾಲವಾಗಿ ಬೆಳೆಯಬೇಕೆಂಬ ಆಶಯ ವ್ಯಕ್ತಪಡಿಸಿದ್ದರು. ಆಗ ಸುಮ್ಮನೆ ಇದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಇದೀಗ ಅದೇ ವಿಚಾರವನ್ನು ತಿರುಚಿ ಚುನಾವಣಾ ಅಸ್ರ್ತವಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಅಕ್ಷೇಪಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಹುನ್ನಾರ ಜನತೆಗೆ ಅರ್ಥವಾಗಿದೆ. ಆದ್ದರಿಂದ ಜನರು ಇವರೆಡು ಪಕ್ಷಗಳ ಹೇಳಿಕೆಗೆ ಸ್ಪಂದಿಸುತ್ತಿಲ್ಲ. ಕೆಲ ಸಂಘಟನೆಗಳನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಫಲ ಕೊಡುತ್ತಿಲ್ಲ ಎಂದು ಅವರು ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಟ್ಟಡವು, ಬಿಜೆಪಿ ಚಿಹ್ನೆಯಾದ ಕಮಲದ ಅಕಾರದಲ್ಲಿದ್ದು ಅದನ್ನು ಮುಚ್ಚುವಂತೆ ಕಾಂಗ್ರೆಸ್ಸಿಗರು ಒತ್ತಾಯಿಸಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಚಿಹ್ನೆಯಾದ ಎರಡು ಕೈಗಳನ್ನು (ಹಸ್ತ) ಮುಚ್ಚಲು ಸಾಧ್ಯವೇ? ಇದಕ್ಕೆ ಕಾಂಗ್ರೆಸ್ ಮುಖಂಡರು ಇದಕ್ಕೆ ಉತ್ತರ ಹೇಳಬೇಕು ಎಂದು ಸವಾಲೆಸೆದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ