ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ 224 ಕ್ಷೇತ್ರಗಳ ಬಗ್ಗೆ ದೆಹಲಿಯಲ್ಲಿ 2- 3 ಬಾರಿ ಸುದೀರ್ಘ ಚರ್ಚೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಚರ್ಚೆಯಲ್ಲಿ ಭಾಗವಹಿಸಿದ್ದರು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.
ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ಚರ್ಚೆ ಮತ್ತು ವಿಧಾನಸಭೆಯ ಅಭ್ಯರ್ಥಿಗಳ ಪಟ್ಟಿಯನ್ನು ಗಮನಿಸಿದಾಗ ಬಿಜೆಪಿ ರಾಜ್ಯದಲ್ಲಿ ಬಹುಮತ ಪಡೆದು ಸರಕಾರ ರಚಿಸುವುದು ನಿಶ್ಚಿತ ಎಂಬ ಭಾವನೆ ಮೂಡಿದೆ ಎಂದು ನುಡಿದರು.
224 ಕ್ಷೇತ್ರಗಳ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ. ಎಷ್ಟು ಜನರ ಪಟ್ಟಿ ಎಂಬ ಕುರಿತು ಅಂದಾಜಿಲ್ಲ. 15-20 ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ವಿವರವನ್ನು ನಾಳೆ ಬಿಡುಗಡೆ ಮಾಡಬಹುದು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ಹಾಲಿ ಶಾಸಕರಿಗೆ ಟಿಕೆಟ್ ನೀಡದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆಗಳು ನಡೆದಿವೆ. ಯಾರೋ ಮೂರ್ನಾಲ್ಕು ಜನರಿಗೆ ಸಿಗದೆ ಇರಬಹುದು. ಈ ವಿಷಯದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ