ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರ್, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ, ಸ್ಥಳೀಯ ಮುಖಂಡರಾದ ಈರಣ್ಣ ಗಿಡ್ಡಪ್ಪಗೋಳ, ಮಲ್ಲಿಕಾರ್ಜುನ ಅಂಗಡಿ, ಬಿ. ಜಿ. ರೇವಡಿಗಾರ, ಶಂಭೋಜಿ ಇನ್ನೂ ಅನೇಕ ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ತಾಲ್ಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದೇ 19ರಂದು ನಿರಾಣಿ ಅವರು ಮತ್ತೊಮ್ಮೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ನಿರಾಣಿ ಅವರು ಸಿದ್ದೇಶ್ವರ ಹಾಗೂ ಗಣೇಶ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು.
ಈಗಾಗಲೇ ಬೀಳಗಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ನಿರಾಣಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡುತ್ತಾ ತಮಗೆ ಮತ್ತೊಮ್ಮೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೀಳಗಿಯಲ್ಲಿ ವಾಸ್ತವ್ಯ ಇರುವ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.
ಕೆರೆಗಳಿಗೆ ನೀರು ತುಂಬಿಸಿರುವುದು, ದಶಕಗಳ ಕಾಲ ಬಾಕಿ ಇದ್ದ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತಂದಿರುವುದು, ಪ್ರತಿ ಗ್ರಾಮಗಳಲ್ಲೂ ಶುದ್ದ ನೀರು ಕುಡಿಯುವ ಘಟಕ, ರಸ್ತೆಗಳ ಡಾಂಬರೀಕರಣ, ಚರಂಡಿ ನಿರ್ಮಾಣ, ವಿದ್ಯುತ್ ದೀಪ ಅಳವಡಿಕೆ, ಸರ್ಕಾರಿ ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳೇ ಪ್ರಚಾರದ ಅಸ್ತ್ರವಾಗಿದೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ