ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾಗಿ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ರಾಜಕೀಯಕ್ಕೆ ಧುಮುಕಿದ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಲ್ಲದೆ, ರಾಜ್ಯ ರಾಜಕಾರಣದ ವರೆಗೆ ಬೆಳೆಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳಿಗೆ ನಾನು ಎಂದೆಂದೂ ಚಿರಋಣಿ ಎಂದು ತಿಳಿಸಿದ್ದಾರೆ.
ಈಗ ನಾಲ್ಕನೇ ಬಾರಿ ಜನರ ಆಶೀರ್ವಾದ ಪಡೆಯಲು ನಾನು ಬಯಸಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪವನ್ನು ಹೊಂದಿದ್ದೇನೆ. ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನರು ಕೈಜೋಡಿಸುತ್ತಾರೆ ಹಾಗೂ ನನ್ನನ್ನು ಮತ್ತೊಮ್ಮೆ ಆಶೀರ್ವದಿಸುತ್ತಾರೆ ಎಂಬ ಅಚಲ ವಿಶ್ವಾಸ ನನ್ನದು ಎಂದು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ