ಬೆಂಗಳೂರು: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರ ಮತ್ತು ಮುದ್ದೇಬಿಹಾಳದ ವಿವಿಧ ಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರ ಜೊತೆ ಇಂದು ಬಿಜೆಪಿ ಸೇರಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮತ್ತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ 2018ರ ಪಕ್ಷೇತರ ಅಭ್ಯರ್ಥಿ ಗಂಗಾಧರ ನಾಡಗೌಡ, ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ್, ಕಾಂಗ್ರೆಸ್ ಮುಖಂಡ ಗುರುನಾಥ್ ಎಸ್ ದೇಶಮುಖ್, ಕಾಂಗ್ರೆಸ್ ಯುವ ಮುಖಂಡ ಸಂಗಮೇಶ್ ನಾಗೂರು ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.
ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ. ಮೋಹನ್, ಶಾಸಕ ಎ.ಹೆಚ್. ನಡಹಳ್ಳಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ