ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ದೇಶದ್ರೋಹಿಗಳನ್ನು, ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಆರೋಪಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಉತ್ತರ ಪ್ರದೇಶದ ಇಮ್ರಾನ್ ಪ್ರತಾಪ್ ಗಡಿಯಾ ಇದ್ದಾನೆ. ಈತ, ಇತ್ತೀಚೆಗೆ ಹತ್ಯೆಯಾದ ಗ್ಯಾಂಗ್‍ಸ್ಟರ್ ಅತೀಕ್ ಅಹ್ಮದ್‍ನ ಆತ್ಮೀಯ ಸ್ನೇಹಿತ. ಅಲ್ಲದೆ, ಅತೀಕ್ ಅಹ್ಮದ್ ತನ್ನ ಗುರುವೆಂದು ಹೇಳುತ್ತಿದ್ದ ಇಮ್ರಾನ್ ಅತೀಕ್‍ನ ಮೇಲೆ ಶಾಹಿರಿಗಳನ್ನು ಬರೆಯುತ್ತಿದ್ದ. ಇಮ್ರಾನ್‍ನ ಕಾರ್ಯಕ್ರಮಗಳಲ್ಲಿ ಅತೀಕ್ ಭಾಗವಹಿಸುತ್ತಿದ್ದ ಎಂದು ವಿವರಿಸಿದರು.
ಇಮ್ರಾನ್‍ನ ಶಾಹಿರಿಗಳು ದೇಶದ್ರೋಹದ, ಸಮಾಜ ವಿರೋಧಿÀ ಮತ್ತು ಹಿಂದೂಗಳ ವಿರುದ್ಧ ಮುಸಲ್ಮಾನರನ್ನು ಎತ್ತಿಕಟ್ಟುವುದನ್ನು ಒಳಗೊಂಡಿವೆ. ಹತ್ಯೆಯಾದ ಅತೀಕ್ ಅಹ್ಮದ್, ಅಶ್ರಫ್ ಅಹ್ಮದ್ ಮತ್ತು ಎನ್‍ಕೌಂಟರ್‍ನಲ್ಲಿ ಹತನಾದ ಅಸಾದ್ ನೊಂದಿಗೆ ಇಮ್ರಾನ್ ನಂಟು ಹೊಂದಿದ್ದ. ದೇಶದ್ರೋಹ ಕೆಲಸ ಮಾಡಿದ ಇದೇ ಇಮ್ರಾನ್ ನನ್ನು ಉತ್ತರ ಪ್ರದೇಶದಿಂದ ಮಹಾರಾಷ್ಟ್ರಕ್ಕೆ ಕರೆತಂದು ರಾಜ್ಯಸಭಾ ಸದಸ್ಯನನ್ನಾಗಿ ಮಾಡಿ ಕಾಂಗ್ರೆಸ್ ಪಾಪದ ಕೆಲಸ ಮಾಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅತೀಕ್ ಅಹ್ಮದ್ ಮೇಲೆ ಕೊಲೆ, ಅತ್ಯಾಚಾರ, ಅಪಹರಣ, ದರೋಡೆ, ಜಮೀನು ಅತಿಕ್ರಮಣ ಸೇರಿದಂತೆ ವಿವಿಧ 102 ಪ್ರಕರಣಗಳಿದ್ದವು. ಇಂತಹ ಅಪರಾಧಿಗೆ ಇಮ್ರಾನ್ ತನ್ನ ಮನೆಯಲ್ಲಿ ಆತಿಥ್ಯ ನೀಡುತ್ತಿದ್ದ ಎಂದು ಅವರು ಹೇಳಿದರು.
ಮುಸಲ್ಮಾನರನ್ನು ಎತ್ತಿಕಟ್ಟುವ ಕೆಲಸ
ಟಿಪ್ಪು ಜಯಂತಿ ವಿರುದ್ಧ ಹೋರಾಟ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದಿದ್ದ ಇಮ್ರಾನ್, ಮುಸ್ಲಿಮರಿಗೆ ತಲೆ ಬಗ್ಗಿಸುವುದು ಗೊತ್ತಿಲ್ಲ. ತಲೆ ಕಡಿಯುವುದು ಮಾತ್ರ ಗೊತ್ತು ಎಂದು ಹೇಳುವುದರ ಮೂಲ ಮುಸಲ್ಮಾನರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದ. ಇನ್ನು ಪ್ರಯಾಗ್‍ರಾಜ್‍ನಲ್ಲಿ ಪೊಲೀಸರು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾರ್ವಜನಿಕರಿಂದಲೇ ಹತ್ಯೆಯಾದ ಅತೀಕ್ ಅಹ್ಮದ್ ನೊಂದಿಗೆ ನಂಟು ಹೊಂದಿರುವವರನ್ನೆಲ್ಲಾ ಬಂಧಿಸುವಂತೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಉತ್ತರಪ್ರದೇಶ ಭೇಟಿ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಮನವಿ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಸಹ ಇಂತಹ ಶಕ್ತಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್‍ಗೆ ದೇಶದ್ರೋಹಿಗಳ ಮೇಲೆ ಸಮಾಜ ದ್ರೋಹಿಗಳ ಮೇಲೆ ಪ್ರೀತಿ ಜಾಸ್ತಿ. ಮತ ಬ್ಯಾಂಕ್ ರಾಜಕೀಯಕ್ಕೆ ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿದೆ. ಕಾಂಗ್ರೆಸ್‍ನ ಕೈ ಅಪರಾಧಿಗಳ ಜೊತೆ, ದೇಶದ್ರೋಹಿಗಳ ಜೊತೆ ಇದೆ. ಹಿಂದೂಗಳ ವಿರುದ್ಧ ಮುಸಲ್ಮಾನರನ್ನು ಎತ್ತಿಕಟ್ಟಲು ಕುಮ್ಮಕ್ಕು ನೀಡುತ್ತಿದೆ ಎಂದು ಕು.ಶೋಭಾ ಕರಂದ್ಲಾಜೆ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಮಾಧ್ಯಮ ಸಹ ಸಂಚಾಲಕ ಸಂಜಯ್ ಮಯೂಕ್, ರಾಜ್ಯ ವಕ್ತಾರರು ಮತ್ತು ವಿಧಾನಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ ಅವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ