ಮೈಸೂರಿನ ಕೆ. ಆರ್. ಕ್ಷೇತ್ರದ ಎಲ್ಲಾ 270 ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜ ಕಟ್ಟುವ ಹಾಗೂ ನಾಮಫಲಕ ಅಳವಡಿಸುವ ವಿಶೇಷ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಪ್ರಾರಂಭಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಪ್ರಧಾನಿ ನರೇಂದ್ರ ಮೋದಿಜಿ ಸರ್ಕಾರದ ಯೋಜನೆಗಳನ್ನು ಹಾಗೂ ರಾಜ್ಯ ಸರ್ಕಾರದ ಯೋಜನಲೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಹಾಗೂ ಜವಾಬ್ದಾರಿ ಬೂತ್ ಅಧ್ಯಕ್ಷ ಹಾಗೂ ಪೇಜ್ ಪ್ರಮುಖರದ್ದು. ಬರೀ ಚುನಾವಣಾ ದೃಷ್ಠಿಯಿಂದ ಮಾತ್ರ ಬಿಜೆಪಿ ಕಾರ್ಯಕರ್ತರಾದ ನಾವು ಕೆಲಸ ಮಾಡಬಾರದು, ನಮ್ಮ ಕೆಲಸ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವಂತಿರಬೇಕು.
ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರ ಜವಾಬ್ದಾರಿ ಅತೀ ಮುಖ್ಯವಾದದ್ದು. ಮನೆಯ ಜವಾಬ್ದಾರಿ ಇದ್ದರೂ ಸಹ ಸಮಾಜದ ಕೆಲಸ ಮಾಡಬೇಕು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಬೂತ್ ಅಧ್ಯಕ್ಷರು ಭಾಗಿಯಾಗುತ್ತಾರೆ ಇದು ಭಾಜಪಾದ ವಿಶೇಷತೆ. ಜನರ ಕಣ್ಣೀರನ್ನು ಒರೆಸುವ ಕಾರ್ಯ ಬೂತ್ ಅಧ್ಯಕ್ಷರದ್ದು. ಇವತ್ತು ದೇಶದಲ್ಲಿ ಮೋದಿಜಿ ಒಂದು ವಿಷಯವನ್ನು ಕೊಟ್ಟಿದ್ದಾರೆ, ಭ್ರಷ್ಟಾಚಾರ ಮುಕ್ತವಾಗಬೇಕು ಎಲ್ಲೆಡೆಯಲ್ಲಿ ಪಾರದರ್ಶಕ ಆಡಳಿತ ತರಬೇಕು ಎಂದು, ಅದೇ ನಿಟ್ಟಿನಲ್ಲಿ ಕೆ.ಆರ್ ಕ್ಷೇತ್ರವನ್ನೂ ಸಹ ಭ್ರಷ್ಟಾಚಾರ ಮುಕ್ತವಾಗಿಸಬೇಕು. ನೂರೊಂದು ಗಣಪತಿ ದೇವಸ್ಥಾನದಿಂದ ನಂಜುಮಳಿಗೆ ವರೆಗೆ ರಸ್ತೆ ಅಭಿವೃದ್ಧಿ ಗೆ 10 ಕೋಟಿ ರೂ ಗಳನ್ನು ಬಿಡುಗಡೆ ಮಾಡಿದ್ದೇವೆ.
ಕೃಷ್ಣರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪಿಸೋಣ, ಬ್ರಷ್ಟಾಚಾರ ರಹಿತ ಕ್ಷೇತ್ರವನ್ನಾಗಿಸೋಣ. ನಮ್ಮ ಮನೆಯಲ್ಲಿರುವ ಮಕ್ಕಳಲ್ಲಿ ಸಮಾಜ ಸೇವೆಗೆ ಜೋಡಿಸುವ ಜವಬ್ದಾರಿ ನಮ್ಮೆಲರ ಮೇಲೆ ಇದೆ ಎಂದು ತಿಳಿಸಿದರು. ಬರುವ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕ್ಷೇತ್ರ ರಾಜ್ಯ ಮತ್ತು ಕೇಂದ್ರ ಯೋಜನೆಗಳ ಅನುಷ್ಠಾನ ಮಾಡಿಸುವಲ್ಲಿ ಮತ್ತು ಪಕ್ಷದ ಸಂಘಟನಾತ್ಮಕವಾಗಿ ಪ್ರಥಮವಾಗಿಸಲು ಶ್ರಮಿಸೋಣ ಎಂದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ