ಬೆಂಗಳೂರು: ಬಿಜೆಪಿ ಎಲ್ಲರ ಮನ ಗೆಲ್ಲುತ್ತಿದೆ. ನವ ಭಾರತ ನಿರ್ಮಾಣದಲ್ಲಿ ಮತ್ತು ಅಭಿವೃದ್ಧಿಶೀಲ ಕರ್ನಾಟಕದ ವಿಚಾರದಲ್ಲಿ ಅದು ಪ್ರಮುಖ ಪಾತ್ರ ವಹಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಕೇಂದ್ರದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳು ಮತ್ತು ಆಯುಷ್ ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಅವರು ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಪರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವಾಗಿ ಹೊರಹೊಮ್ಮಲು ಬಿಜೆಪಿಯನ್ನೇ ಚುನಾಯಿಸಿ ಎಂದು ಮನವಿ ಮಾಡಿದರು.
ಸಾಮಾಜಿಕ ಸಬಲೀಕರಣ ಮತ್ತು ಆರ್ಥಿಕ ಉನ್ನತಿಗೆ ಬಿಜೆಪಿ ಅನಿವಾರ್ಯ. ಸಮಾಜದ ಅಂಚಿನಲ್ಲಿರುವ ವರ್ಗಗಳ ಪ್ರಗತಿ ಪ್ರಧಾನಿ ಮೋದಿಯವರ ಆಡಳಿತದ ವಿಶಿಷ್ಟ ಲಕ್ಷಣ ಎಂದು ವಿಶ್ಲೇಷಿಸಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಬಿಜಿ ಅಜಯ್ ಕುಮಾರ್ ಗೆಲ್ಲುತ್ತಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ದೇಶ ಹೊಂದಿರುವ ಅಭಿವೃದ್ಧಿಯನ್ನು ಜಗತ್ತು ಬೆರಗಾಗಿ ಗಮನಿಸುತ್ತಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ನಡೆದ ಪ್ರಗತಿ ಕಾರ್ಯಗಳು ಜಗತ್ತನ್ನು ನಿಬ್ಬೆರಗಾಗಿಸಿದೆ. ಅರುಣಾಚಲ ಪ್ರದೇಶದಿಂದ ಗುಜರಾತ್, ಕನ್ಯಾಕುಮಾರಿಯಿಂದ ಲಡಾಖ್ ಪ್ರತಿ
ಭಾರತದ ಮೂಲೆಯು ವೇಗವಾಗಿ ಪ್ರಗತಿ ಹೊಂದುತ್ತಿದೆ. ಸಮಾಜದ ಪ್ರತಿಯೊಂದು ಸ್ತರವನ್ನು ಬಲಪಡಿಸಲು, ಪ್ರಧಾನಮಂತ್ರಿಯವರು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಮತ್ತು ಸಮಾಜದ ಪ್ರತಿಯೊಂದು ವರ್ಗಕ್ಕೆ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ವಿವರಿಸಿದರು.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸೋನೋವಾಲ್, “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ. ಭಾರತದಲ್ಲಿ ಅದರ ದುರಾಡಳಿvವು ಐದು ದಶಕಗಳಿಗಿಂತಲೂ ಹೆಚ್ಚು ಕಾಲ ನಡೆದಿತ್ತು. ಇದರಿಂದ ಭಾರತದ ಬೆಳವಣಿಗೆ ಮತ್ತು ಅಭಿವೃದ್ಧಿಯು ಕುಂಠಿತವಾಯಿತು ಎಂದು ಆಕ್ಷೇಪಿಸಿದರು.
ಕೋವಿಡ್ ಸಂದರ್ಭದಲ್ಲೂ ನರೇಂದ್ರ ಮೋದಿ ಜೀ ದೇಶವನ್ನು ಸಮರ್ಥವಾಗಿ ಮುನ್ನಡೆಸಿದರು. ಜೊತೆಗೇ ಭ್ರಷ್ಟಾಚಾರ ಎಂಬ ಈ ಸಾಮಾಜಿಕ ಪಿಡುಗನ್ನು ದೂರ ಮಾಡಿದ್ದೇವೆ ಎಂದರು. ಡಿಬಿಟಿ ಮೂಲಕ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಸೋನೊವಾಲ್ ಅವರು, “ಮೋದಿ ಜಿಯವರು ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್’ ಎಂಬ ಚಿಂತನೆಯ ಜೊತೆ ರೈತರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸಾಮಾಜಿಕ ಭದ್ರತೆ ಒದಗಿಸಲಾಗಿದೆ ಎಂದರು. ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿರುವುದನ್ನು ಅವರು ಉಲ್ಲೇಖಿಸಿದರು.
ಸಭೆಯಲ್ಲಿ ಚುನಾವಣಾ ಉಸ್ತುವಾರಿ ರಮೇಶ್ ನಾಯ್ಕ್, ಮಾಜಿ ಜಿಲ್ಲಾಧ್ಯಕ್ಷ ಬಸಂತ್ ರಾವ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ