ಬೆಂಗಳೂರು: ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 5ರಂದು ಬಳ್ಳಾರಿ ನಗರಕ್ಕೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದು, ಐದೂ ಕ್ಷೇತ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಬಳ್ಳಾರಿ ನಗರದ ಕಪ್ಪಗಲ್ ರಸ್ತೆಯ ಸತ್ಯಂ ಕಾಲೇಜು ಮೈದಾನದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. 80 ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಪರ ಮೋದಿಯವರು ಮತಯಾಚನೆ ಮಾಡಲಿದ್ದಾರೆ.
ಜಿಲ್ಲೆಯ ಬಳ್ಳಾರಿ ನಗರದ ಸೋಮಶೇಖರ ರೆಡ್ಡಿ, ಬಳ್ಳಾರಿ ಗ್ರಾಮೀಣದ ಬಿ.ಶ್ರೀರಾಮುಲು, ಕಂಪ್ಲಿಯ ಟಿ.ಎಚ್. ಸುರೇಶ್ ಬಾಬು, ಸಿರುಗುಪ್ಪದ ಸೋಮಲಿಂಗಪ್ಪ ಹಾಗೂ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ವಿಧಾನ ಪರಿಷತ್À ಸದಸ್ಯ ಸತೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಮುರಹರಗೌಡ, ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಳ್ಳುವರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ