ಮಂಗಳೂರು : ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿರುವ ಕ್ಯಾಟರಿಂಗ್ ವಲಯದ ಪುನಶ್ಚೇತನಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಮಹಾಸಭೆ ಮತ್ತು ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದ್ದೇಶಿಸಿ ಮಾತನಾಡಿದರು.
ಕ್ಯಾಟರಿಂಗ್ ಮಾಲಕರ ಸಂಘ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚು ಕಷ್ಟದಲ್ಲಿರುವವರಿಗೆ ದಿನಸಿ ಸಾಮಾಗ್ರಿಗಳ ಕಿಟ್ ನೀಡುವುದು, ಕಾರ್ಮಿಕರಿಗೆ ಸೌಲಭ್ಯ ಒದಗಿಸಿಕೊಡುವುದು,ಕೋವಿಡ್ ನಿಯಂತ್ರಣಕ್ಕಾಗಿ ನೀಡಲಾಗುವ ಲಸಿಕೆಯನ್ನು ಎಲ್ಲಾ ಸದಸ್ಯರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕೆಲಸ ಶ್ಲಾಘನೀಯ ಎಂದು ಡಾ. ಭರತ್ ಶೆಟ್ಟಿ ಶುಭ ಹಾರೈಸಿದರು.
ಕ್ಯಾಟರಿಂಗ್ ಮಾಲಕರ ಸಂಘದ ಸ್ಥಾಪಕ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ ರೈ, ಮನಪಾ ಸದಸ್ಯ ಸಂದೀಪ್ ಗರೋಡಿ, ಮಾಜಿ ಅಧ್ಯಕ್ಷ ಸುಧಾಕರ ಕಾಮತ್, ಸತೀಶ್ ಬೋಳಾರ್, ವಿಜಯ್ ಕುಮಾರ್, ಕ್ಯಾಟರಿಂಗ್ ಮಾಲಕರ ಸಂಘದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ