ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಷೋ ಇಂದು ಬೆಂಗಳೂರಿನಲ್ಲಿ ಜನಸಾಗರ, ಜನೋತ್ಸಾಹ, ಸಂಭ್ರಮೋಲ್ಲಾಸದೊಂದಿಗೆ ಆರಂಭವಾಯಿತು. ಸಾವಿರಾರು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ‘ಮೋದಿ ಮೋದಿ’ ಎಂದು ಕೂಗುತ್ತ, ಹೂವಿನ ಸುರಿಮಳೆಗೈಯುತ್ತ ನರೇಂದ್ರ ಮೋದಿಯವರ ರೋಡ್ ಷೋವನ್ನು ಸ್ವಾಗತಿಸಿದರು.
ಸೋಮೇಶ್ವರ ಸಭಾಭವನ ಬಳಿಯಿಂದ ಆರಂಭವಾದ ರೋಡ್ ಷೋವು ಸುಮಾರು 26 ಕಿಮೀ ಕ್ರಮಿಸಲಿದೆ. ಜೆ.ಪಿ. ನಗರ, ಜಯನಗರ, ಸೌತ್ ಎಂಡ್ ಸರ್ಕಲ್, ಮಾಧವರಾವ್ ವೃತ್ತ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ವೃತ್ತ, ಮೈಸೂರು ಸಿಗ್ನಲ್, ಟೋಲ್ ಗೇಟ್ ಸಿಗ್ನಲ್, ಗೋವಿಂದರಾಜನಗರ, ಮಾಗಡಿ ರೋಡ್ ಜಂಕ್ಷನ್, ಶಂಕರ ಮಠ ಸರ್ಕಲ್, ಮಲ್ಲೇಶ್ವರ ಸರ್ಕಲ್, ಸಂಪಿಗೆ ರಸ್ತೆಯ 18ನೇ ಅಡ್ಡರಸ್ತೆ ಜಂಕ್ಷನ್ ಮೂಲಕ ಈ ರೋಡ್ ಷೋ ತೆರಳಲಿದೆ.
ಮೋದಿಯವರನ್ನು ಹತ್ತಿರದಿಂದ ಕಾಣಲು ಮತ್ತು ಪ್ರಧಾನಿಯವರ ವಾಹನ ಮತ್ತು ಮೋದಿಯವರತ್ತ ಹೂವುಗಳನ್ನು ಎಸೆದು ಅವರನ್ನು ಸ್ವಾಗತಿಸಲು ಈ ರಸ್ತೆಯುದ್ದಕ್ಕೂ ಮಕ್ಕಳು, ಹಿರಿಯರು ಸೇರಿ ಅಭಿಮಾನಿಗಳು, ಸಾರ್ವಜನಿಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಯುತ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನಗಳ ರೋಡ್ ಷೋ ನಡೆಯಲಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಅವರು ರೋಡ್ ಷೋ ಸಂದರ್ಭದಲ್ಲಿ ಜೊತೆಗೆ ಇದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ