ಉಡುಪಿಯಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ಘಟನೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಲಾಯಿತು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್, ಕು. ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.