ಲೋಕಸಭಾ ಚುನಾವಣೆಯ ರಣರಂಗ ಕಾವೇರುತ್ತಿದೆ. ದೇಶ 2024 ರ ಲೋಕಸಭಾ ಚುನಾವಣೆಗೆ ಸಜ್ಜುಗೊಂಡಿದ್ದು ರಾಜ್ಯದಲ್ಲೂ ಎಲ್ಲಾ ರಾಜಕೀಯ ಪಕ್ಷಗಳ ಪಾಳಯಗಳಲ್ಲಿ ಚುನಾವಣೆಯ ಪೂರ್ವ ಯಾರಿ ನಡೆಯುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವೂ ಈ ಬಾರಿ ಭಾರೀ ಸದ್ದು ಮಾಡುತ್ತಿದೆ. ಇಲ್ಲಿ ಹಾಲಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ಅಡ್ಡಗಾಲಾಗುತ್ತಿದ್ದಾರೆ. 4ನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವ ಕಟೀಲ್ ಅವರಿಗೆ ಈಗ ಬಿಗ್ ಶಾಕ್ ಎದುರಾಗಿದೆ.
ಕಾರ್ಯಕರ್ತರ ವಿರೋಧ ಎದುರಿಸುತ್ತಿರುವ ಕಟೀಲ್ ಅವರ ಬದಲಿಗೆ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪಾಳಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿದೆ. ಕ್ಯಾಪ್ಟನ್ ಅವರ ಹೆಸರಿಗೆ ವಿರೋಧ ಪಡಿಸುವ ಯಾವ ಕಾರಣವೂ ಕಟೀಲ್ ಬೆಂಬಲಿಗರಲ್ಲಿ ಇಲ್ಲ. ಪರಿವಾರ ಸಂಘಟನೆಗಳು ಕೂಡಾ ಕ್ಯಾಪ್ಟನ್ ಹೆಸರಿಗೆ ಸಮ್ಮತಿ ಸೂಚಿಸಿವೆ ಎಂದು ಹೇಳಲಾಗುತ್ತಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸುಶಿಕ್ಷಿತರು, ಸಂಘ ಹಾಗೂ ಸೇನೆಯ ಹಿನ್ನೆಲೆ ಹೊಂದಿರುವ ವ್ಯಕ್ತಿ. ರಾಜಕೀಯ ಜೀವನ ಅಥವಾ ಸಾಮಾಜಿಕ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇವರ ಮೇಲಿಲ್ಲ ಎಂಬುದೇ ಕ್ಯಾಪ್ಟನ್ ಪಾಲಿನ ಬಹುದೊಡ್ಡ ಪ್ಲಸ್ ಪಾಯಿಂಟ್. 2019 ರ ಲೋಕಸಭಾ ಚುನಾವಣೆಯಲ್ಲಿ ಇವರ ಹೆಸರು ಪ್ರಬಲವಾಗಿ ಕೇಳಿಬಂದಿದ್ದರೂ ಅಂತಿಮವಾಗಿ ನಳಿನ್ ಅವರು ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾದರು. ಮುಂದೆ ರಾಜಕೀಯ ತುಳಿತಕ್ಕೊಳಗಾಗಿ ಯಾವುದೇ ಪ್ರಮುಖ ಜವಾಬ್ದಾರಿ ಇಲ್ಲದೆ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪೇರೆಂಟ್ ಬಾಡಿಯ ನಿರ್ಲಕ್ಷಕ್ಕೆ ಒಳಗಾಗಿದ್ದರು. ಅದೆಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ, ತಾಳ್ಮೆಯ ಪ್ರತಿರೂಪ ಎಂಬಂತಿದ್ದರು. ಅವರ ಧ್ಯೇಯ ನಿಷ್ಠೆಗೆ ಈಗ ರಾಜ್ಯ ಕಾರ್ಯದರ್ಶಿ ಹುದ್ದೆ ಒಲಿದುಬಂದಿದೆ, ಅದರ ಬೆನ್ನಲ್ಲೇ ಕಾರ್ಯಕರ್ತರ ಲೋಕಸಭಾ ಅಭ್ಯರ್ಥಿಯಾಗಿ ಜನಮಾನಸದಲ್ಲಿ ಸುದ್ದಿಯಲ್ಲಿದ್ದಾರೆ.
ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಿದ್ದ ನಳಿನ್ ಕುಮಾರ್ ಕಟೀಲ್ ಅವರು ಈಗ ಕಾರ್ಯಕರ್ತರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ, ಇದೆಲ್ಲವೂ ಚುನಾವಣಾ ಗಿಮಿಕ್ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧದ ಅಲೆಯಿಂದ ಬೇಸತ್ತಿರುವ ಬಿಜೆಪಿ ತನ್ನ ಕಾರ್ಯಕರ್ತರನ್ನು ತಣಿಸುವ ನಿಟ್ಟಿನಲ್ಲಿ ಈ ಬಾರಿ ಟಿಕೆಟ್ ಬದಲಾವಣೆಯ ನಿರ್ಧಾರ ಮಾಡಿರುವುದು ಬಹುತೇಕ ಪಕ್ಕಾ ಆಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸ ಮುಖ ಕಣಕ್ಕೆ?
ಬಿಜೆಪಿ ಟಿಕೆಟ್ ರೇಸ್ನಲ್ಲಿ ಬ್ರಿಜೇಶ್ ಚೌಟಾ#LoksabhaElections2024 #LoksabhaElection #loksabhaelections #loksabha2024 #BJP #Karnataka #Mangaluru https://t.co/dJmsbTCnbP— TV9 Kannada (@tv9kannada) January 25, 2024
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ