ಲೋಕಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿರುವ ಕರ್ನಾಟಕ ರಾಜ್ಯದಿಂದ ಸಾಧ್ಯತೆಯ ಭವಿಷ್ಯವೊಂದು ಹೊರಬಿದ್ದಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ
ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳನ್ನೂ ಬಿಜೆಪಿ ಮೈತ್ರಿ ಗೆದ್ದರೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸರ್ಕಾರ ಪತನದ ಸುದ್ದಿ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರು ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಈಗ ಕೊಡುತ್ತಿರುವ ಐದು ಕೆಜಿ ಕೂಡ ಮೋದಿ ಸರ್ಕಾರದ್ದು, ಇದು ಜನರಿಗೆ ಮಾಡುತ್ತಿರುವ ಮೋಸ. 200 ಯುನಿಟ್ ಉಚಿತ ವಿದ್ಯುತ್ ಫ್ರೀ ಕೊಡುತ್ತೇವೆ ಹೇಳಿ ಈಗ ಅದಕ್ಕೂ ಕಂಡೀಷನ್ ಹಾಕಿದ್ದಾರೆ, ರಾಜ್ಯದಲ್ಲಿ ಒಬ್ಬರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿರುವ ದಾಖಲೆ ಇದ್ದರೆ ಕೊಡಿ, ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ