ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಜಾತಿ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳು ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಾ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ-ಆರ್‌ಎಸ್ ವಿರೋಧಿಸುತ್ತಿದೆ, ಮೀಸಲಾತಿ ವಿರೋಧಿ ಬಿಜೆಪಿ ಮತ್ತು ಆರ್‌ಎಸ್ಎಸ್ ಅನ್ನು ತಿರಸ್ಕರಿಸಿ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಿದ್ದರಾಮಯ್ಯ ಹೇಳಿಕೆ ಮತ್ತು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಗವತ್ ಅವರ ಹೇಳಿಕೆಯ ಸ್ಕ್ರೀನ್‌ಶಾಟ್ ಹಾಕಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಿದ್ದರಾಮಯ್ಯಗೆ ಕೌಂಟರ್ ನೀಡಿದ್ದಾರೆ.
Agenda Vs Fact pic.twitter.com/fAZOujR7oG
— Gurme Suresh Shetty (Modi Ka Parivar) (@GurmeSuresh) January 29, 2024
ಆರ್‌ಎಸ್‌ಎಸ್ ಮೀಸಲಾತಿ ವಿರೋಧಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಯಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಗವತ್ ಅವರ “ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಮುಂದುವರೆಯಲಿ” ಎಂಬ ಹೇಳಿಕೆಯ ವರದಿಯನ್ನು ಹಾಕಿ ಕುಟುಕಿದ್ದಾರೆ.
ಮೀಸಲಾತಿ ವಿಚಾರವಾಗಿ ಮೋಹನ್ ಭಾಗವತ್ ಅವರು “ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮದೇ ಸಹಜೀವಿಗಳನ್ನ ಹಿಂದೆ ಇರಿಸಿದ್ದೇವೆ. ನಾವು ಅವರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ. 2000 ವರ್ಷಗಳ ವರೆಗೆ ಈ ಪ್ರಕ್ರಿಯೆ ಹೀಗೆ ಮುಂದುವರಿದಿದೆ. ಹಾಗಾಗಿ ಸಮಾಜದಲ್ಲಿ ಅಸಮಾನತೆಯನ್ನು ತೊಲಗಿಸುವವರೆಗೆ, ಅಸಮಾನತೆಗೆ ಒಳಗಾದವರ ಪುನಶ್ಚೇತನಕ್ಕಾಗಿ ವಿಶೇಷ ಪರಿಹಾರ ನೀಡಬೇಕು. ಅವುಗಳಲ್ಲಿ ಮೀಸಲಾತಿ ಕೂಡ ಒಂದು. ಆದ್ದರಿಂದ ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಅನ್ನೋದು ಮುಂದುವರಿಯಬೇಕು” ಎಂದು ಈ ಹಿಂದೆ ಒತ್ತಾಯಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ