ನವದೆಹಲಿ : ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀಯುತ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸವಿವರವಾಗಿ ನೀರಾವರಿ ಸಚಿವರಾದ ಜೆ. ಮಾಧುಸ್ವಾಮಿ ಅವರು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಈಗಾಗಲೇ ರಾಜ್ಯದಲ್ಲಿ ಅನುಷ್ಠಾನಗೊಂಡು ಕಾಮಗಾರಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಮಾಹಿತಿಯನ್ನು ಕೇಂದ್ರ ಸಚಿವರಿಗೆ ನೀಡಲಾಯಿತು ಹಾಗೂ ರಾಜ್ಯದ ಹೊಸ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಯನ್ನು ಮಾನ್ಯ ಸಚಿವರಿಗೆ ನೀಡಿ ಹಣವನ್ನು ಬಿಡುಗಡೆ ಮಾಡಲು ವಿನಂತಿಸಲಾಯಿತು.
ಸಣ್ಣ ನೀರಾವರಿ ಇಲಾಖೆ ಕಡೆಯಿಂದ ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಪ್ರಮುಖ ನೀರಾವರಿ ಯೋಜನೆಗಳ ವಿವರ ಕೆಳಕಂಡಂತಿದೆ.
1.ಅಟಲ್ ಭೂಜಲ್ ಯೋಜನೆ.
2.ಕೃಷ್ಣ ಕಣಿವೆಯಲ್ಲಿ ಚೆಕ್ ಡ್ಯಾಮ್/ಪಿಕ್ ಅಪ್ ಗಳ ನಿರ್ಮಾಣ ದ ಬೃಹತ್ ಯೋಜನೆ.
3.ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ತುಂಬಿಸುವ ಯೋಜನೆ
4.ತುಮಕೂರು ಜಿಲ್ಲೆಯಲ್ಲಿ ಅಂತರ್ಜಲ ಅತೀ ಬಳಕೆ ಶೋಷಿತ ಪ್ರದೇಶದ ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆ.
5.ಪಶ್ಚಿಮ ವಾಹಿನಿ ಯೋಜನೆ
6.ಖಾರ್ ಲ್ಯಾಂಡ್ ಯೋಜನೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಭಗವಂತ ಖೂಬಾ, ಶಾಸಕರಾದ ಮಸಾಲಾ ಜಯರಾಂ, ವಿಧಾನಪರಿಷತ್ ಶಾಸಕರಾದ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ