ಬೈಂದೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಕಾನೂನು ಸುವ್ಯವಸ್ಥೆಯನ್ನು ಕುಲಗೆಡಿಸಿಬಿಟ್ಟಿದೆ. ಕಳ್ಳಕಾಕರಿಗೆ, ದರೋಡೆಕೋರರಿಗೆ ಯಾವುದೇ ಭಯವಿಲ್ಲದಂತಾಗಿದೆ. ರಾತ್ರಿ ಹಗಲೆನ್ನದೆ ದರೋಡೆ ಪ್ರಕರಣಗಳು ನಡೆಯುತ್ತಿದ್ದರೂ ಗೃಹ ಇಲಾಖೆ ಕಣ್ಮುಚ್ಚಿ ಕುಳಿತುಕೊಂಡಿದೆ. ಇದರಿಂದ ಜನರು ಭಯ ಭೀತರಾಗಿ ಜೀವನ ನಡೆಸುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹರಿಹಾಯ್ದಿದ್ದಾರೆ.
ಮಂಗಳೂರು ಕೋಟೆಕಾರು ವ್ಯವಸಾಯ ಬ್ಯಾಂಕ್ನಲ್ಲಿ ಹಗಲು ಹೊತ್ತು ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಲೂಟಿ ಮಾಡಲಾಗಿದೆ. ಹುಬ್ಬಳ್ಳಿ, ಬೀದರ್, ಕಲ್ಬುರ್ಗಿ ಸೇರಿದಂತೆ ರಾಜ್ಯದ ಹಲವು ಕಡೆ ಒಂದೇ ದಿನ ದರೋಡೆ ಪ್ರಕರಣಗಳು ದಾಖಲಾಗಿರುವುದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಸ್ಪಷ್ಟವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೂ ದರೋಡೆ ಪ್ರಕರಣ, ಗೋ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ಜಿಲ್ಲಾ ಪೊಲೀಸ್, ಆಡಳಿತ ವ್ಯವಸ್ಥೆ ಇದನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಒಟ್ಟಾರೆಯಾಗಿ ರಾಜ್ಯದ ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಶಾಸಕರು ಕಿಡಿ ಕಾರಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ