ಬೆಂಗಳೂರು: ರೈತರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸಬೇಕಾದ ಹಾಪ್ ಕಾಮ್ಸ್ ಜನವಿರೋಧಿ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ರೈತ ವಿರೋಧಿಯಾಗಿ ಹಾಗೂ ದಲ್ಲಾಳಿಗಳ ಪರವಾದ ಸಂಸ್ಥೆಯಾಗಿ ಮಾರ್ಪಟ್ಟಿದೆ. ಅಲ್ಲದೆ ಭ್ರಷ್ಟಾಚಾರದ ಕೂಪವಾಗಿ ಪರಿಣಮಿಸಿದ್ದು ಗ್ರಾಹಕರಿಗೂ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದ ನೇತೃತ್ವದಲ್ಲಿ ಇಂದು ಭಾರೀ ಪ್ರತಿಭಟನೆ ನಡೆಸಲಾಯಿತು.
ಶುಕ್ರವಾರ (ಜ.31) ಬೆಳಗ್ಗೆ 11 ಗಂಟೆಗೆ ಬೆಂಗಳೂರು ಕೇಂದ್ರ ಲಾಲ್ ಬಾಗ್ ವ್ಯಾಪ್ತಿಯ ಹಾಪ್ ಕಾಮ್ಸ್ ಕೇಂದ್ರ ಕಚೇರಿಗೆ ರಾಜ್ಯ ರೈತ ಮೋರ್ಚಾದ ವತಿಯಿಂದ ಮುತ್ತಿಗೆ ಹಮ್ಮಿಕೊಳ್ಳಲಾಗಿತ್ತು. ಈ ಮುತ್ತಿಗೆಗೆ ಅವಕಾಶ ನೀಡದ ಪೊಲೀಸರು ರೈತ ಮೋರ್ಚಾದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳನ್ನು ಬಂಧಿಸಿ ಸಿದ್ದಾಪುರ ಠಾಣೆಗೆ ಕರೆದೊಯ್ದರು. ಪ್ರಜಾಸತ್ತಾತ್ಮಕವಾಗಿ ನಡೆಯುವ ಪ್ರತಿಭಟನೆಗಳಿಗೆ ಅವಕಾಶ ನೀಡದ ಇಲಾಖೆಯ ವಿರುದ್ಧ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟಿಸಲಾಯಿತು. ರೈತ ವಿರೋಧಿ ಹಾಪ್ ಕಾಮ್ಸ್‌ಗೆ ಧಿಕ್ಕಾರ ಎಂದು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಎಲ್ಲೆಲ್ಲಿ ಪ್ರತಿಭಟನೆ?
ಬೆಂಗಳೂರು ಹಾಪ್ ಕಾಮ್ಸ್ನ ಕೇಂದ್ರ ಕಚೇರಿ ಎದುರುಗಡೆ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಕಚೇರಿಗಳ ಮುಂಭಾಗದಲ್ಲಿ ರೈತರ ಮತ್ತು ಗ್ರಾಹಕರ ಪರವಾಗಿ ಹಾಪ್ ಕಾಮ್ಸ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಈ ಜಿಲ್ಲೆಗಳ ರೈತ ಮೋರ್ಚಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಈ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತರಕಾರಿ ಬೆಳೆಗಾರರು ಮತ್ತು ಬೆಳೆಗಳನ್ನು ಬೆಳೆಯುವ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಾಪ್ ಕಾಮ್ಸ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು. ಹಾಪ್ ಕಾಮ್ಸ್‌ಗೆ ನಷ್ಟವಾಗಲು ಯಾರು ಕಾರಣರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರೈತಮೋರ್ಚಾ ಆಗ್ರಹಿಸಿದೆ.
ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಡಾ.ನವೀನ್ ಕುಮಾರ್ ಬಿ.ಸಿ., ಅವರ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.
ರಾಜ್ಯ ಕಾರ್ಯದರ್ಶಿ ಸತೀಶ್ ಕಡತಲಮನೆ, ರೈತ ಮೋರ್ಚಾ ಉಪಾಧ್ಯಕ್ಷ ರುದ್ರೇಶ್ ಮತ್ತು ಐದು ಜಿಲ್ಲೆಗಳ ರೈತ ಮೋರ್ಚಾ ಜಿಲ್ಲಾಧ್ಯಕ್ಷರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ
-
ಮೀಟರ್ ಬಡ್ಡಿ ಸಂಗ್ರಹ ಕುರಿತಂತೆ 7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಕಾಂಗ್ರೆಸ್ ಏನು ಮಾಡುತ್ತಿತ್ತು ? ಬಿಜೆಪಿ ಪ್ರಶ್ನೆ