ಬೆಂಗಳೂರು: ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಹೈಕೋರ್ಟಿನಲ್ಲಿ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ ಎಂದು ವಿವರಿಸಿದರು.
ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಹೈಕೋರ್ಟ್ ಮಾಡಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪನ್ನು ರಾಜ್ಯ ಹೈಕೋರ್ಟ್ ಹೇಳಿದೆ ಎಂದು ತಿಳಿಸಿದರು. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಎಂದು ಅವರು ನುಡಿದರು.
ಲೋಕಾಯುಕ್ತ ಮತ್ತು ಇ.ಡಿ. ತನಿಖೆ ನಡೆಯುತ್ತಿದೆ. ಮುಂದೇನಾಗುತ್ತದೆ ಕಾದು ನೋಡೋಣ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಂ ಕುಟುಂಬ ನಿರಪರಾಧಿಗಳೆಂದು ಹೇಳಿದೆಯೇ ಎಂದೂ ಅವರು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಲೋಕಾಯುಕ್ತ ತನಿಖೆ, ಅವರ ವರದಿ ಬಂದ ಬಳಿಕ ನಾವು ಮಾತನಾಡುತ್ತೇವೆ ಎಂದ ಅವರು, ಇವತ್ತಿನ ಹೈಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿಗಳು, ಅವರ ಕುಟುಂಬ ನಿರಪರಾಧಿ ಎಂದು ಹೇಳಿಲ್ಲ ಎಂದು ಪುನರುಚ್ಚರಿಸಿದರು. ಲೋಕಾಯುಕ್ತದ ವರದಿಯನ್ನು ಕಾದು ನೋಡೋಣ ಎಂದು ಹೇಳಿದರು.
ಯಡಿಯೂರಪ್ಪ ಅವರ ವಿರುದ್ಧ ಇದ್ದ ಪೋಕ್ಸೊ ಕೇಸಿನಲ್ಲಿ ಕೆಳಹಂತದ ಕೋರ್ಟಿನ ಸಮನ್ಸ್ ಅನ್ನು ರಾಜ್ಯ ಹೈಕೋರ್ಟ್ ಬದಿಗಿರಿಸಿದೆ. ರಾಜ್ಯ ಹೈಕೋರ್ಟ್‍ನಲ್ಲಿ ಈ ಕುರಿತು ಬಹಳ ದಿನ ವಾದವಿವಾದ ನಡೆದಿದೆ. ಅದರ ಆಧಾರದಲ್ಲಿ ನಮ್ಮ ಅರ್ಜಿಯನ್ನೂ ಪುರಸ್ಕರಿಸಿ, ಕೆಳಹಂತದ ಕೋರ್ಟಿನ ಸಮನ್ಸ್ ರದ್ದು ಮಾಡಿ ಮರು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
You may also like
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ
-
ಮೀಟರ್ ಬಡ್ಡಿ ಸಂಗ್ರಹ ಕುರಿತಂತೆ 7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಕಾಂಗ್ರೆಸ್ ಏನು ಮಾಡುತ್ತಿತ್ತು ? ಬಿಜೆಪಿ ಪ್ರಶ್ನೆ