ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇಧಕ್ಕೆ ಸೇರಿಸುವಂತೆ ತುಳುವಿನಲ್ಲೇ ಮನವಿ ಮಾಡಿಕೊಂಡು ತುಳುನಾಡಿನ ಜನರ ಶ್ಲಾಘನೆ ಗಳಿಸಿದ್ದಾರೆ.
ಈ ಬಗ್ಗೆ ವಿಡಿಯೋವನ್ನು ಹರೀಶ್ ಪೂಂಜಾ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡು ” ಕರ್ನಾಟಕ ರಾಜ್ಯದ ಮುಖ್ಯಮಂತ್ರಿಲಾದ್ ಜವಾಬ್ಧಾರಿ ವಹಿಸೊಂಡಿ ಬೋಕ್ಕ ಸುರೂತ ಸರ್ತಿ ತುಳುನಾಡ್‌ಗ್ ಬತ್ತಿನ ಶ್ರೀ ಬಸವರಾಜ ಬೊಮ್ಮಾಯಿ ಮೆರೆಡ ನಮ್ಮ ಅಪ್ಪೆ ಬಾಷೆ ಆಯಿನ ತುಳು ಬಾಷೆಗ್ 8ನೆ ಪರಿಚ್ಛೇದದ ಮಾನಾದಿಗೆ ಒದಗಾದ್ ಕೊರೋಡು ಪಂಡ್ದ್ ಮಾನ್ಯ ಮುಖ್ಯಮಂತ್ರಿಲೆಡ ಬಿನ್ನ ಮಲ್ತೊಂಡೆ” ಎಂದು ಬರೆದುಕೊಂಡಿದ್ದಾರೆ.
ಶಾಸಕರ ಈ ನಡೆ ತುಳುನಾಡಿನ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ತುಳು ಭಾಷೆ 8ನೇ ಪರಿಚ್ಛೇಧಕ್ಕೆ ಸೇರ್ಪಡೆಯಾಗಲಿ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ