ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಂಸದರಾದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವರಾದ ಸುಧಾಕರ್, ಜಿಲ್ಲೆಯ ಶಾಸಕರುಗಳು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟಿಂಬ ಕಲ್ಯಾಣ ಇಲಾಖೆಯ ಆಯುಕ್ತರು, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನವಾಗಿ ನಿರ್ಮಿಸಲಾದ 32 ಹಾಸಿಗೆಗಳ ಐಸಿಯು ಘಟಕವನ್ನು ಉದ್ಘಾಟಿಸಿದರು.
ಉರ್ವಾ ಸ್ಟೋರ್ಸ್‌ನಲ್ಲಿನ ‘ಡಾ|| ಬಿ.ಆರ್.ಅಂಬೇಡ್ಕರ್ ಭವನ’ದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ