ನಾನು ಹೋದಲ್ಲಿ, ಬಂದಲ್ಲಿ ಕಟೌಟ್ ಹಾಕಬೇಡಿ, ಶುಭಕೋರುವ ಹೋರ್ಡಿಂಗ್ ಯಾರೂ ಹಾಕಬೇಡಿ ಎಂದು ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ನಾನು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆಯಿಂದ ಜನರಿಗೆ ಉಂಟಾಗುವ ತೊಂದರೆ ಗಮನಿಸಿ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವುದಾಗಿ ತಿಳಿಸಿದ್ದ ಸಿಎಂ ಬೊಮ್ಮಾಯಿ, ಈಗ ಉಡುಪಿ ಪ್ರವಾಸದ ಸಂದರ್ಭದಲ್ಲಿ ಶುಭಕೊರುವ ಕಟೌಟ್ ಯಾರೂ ಹಾಕಬೇಡಿ ಎಂದು ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ಮನವಿ ಮಾಡಿ ಮತ್ತೊಮ್ಮೆ ಸರಳತೆಯಿಂದ ಮಾದರಿಯಾಗಿದ್ದಾರೆ.
ಅಧಿಕಾರ ವಹಿಸುತ್ತಲೇ ಅನೇಕ ಕ್ರಾಂತಿಕಾರಕ ಬದಲಾವಣೆಗಳನ್ನು ಬಿಜೆಪಿ ಮುಖ್ಯಮಂತ್ರಿಯೋರ್ವರು ಜಾರಿಗೆ ತರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ಹೂಗುಚ್ಛಗಳನ್ನು ನಿಷೇಧಿಸಿ ಸರಳವಾಗಿ ಕಾರ್ಯಕ್ರಮ ನಡೆಸಿಕೊಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ